ಬೆಂಗಳೂರು: ಮದುವೆಗೆ (Marriage) ಸೀರಿಯಲ್ ನಟಿ (Serial Actress) ಒಪ್ಪದ್ದಕ್ಕೆ ಯುವಕ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮದನ್ (25) ಮೃತಪಟ್ಟ ಯುವಕ. ರೂಮಿನಲ್ಲೇ ನೇಣು ಬಿಗಿದುಕೊಂಡು ಮದನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಮನೆಯಲ್ಲಿ ನಾನು ಹೇಳದೇ ನನ್ನ ಹೆಂಡತಿ ತೀರ್ಮಾನ ಮಾಡ್ತಾಳಾ? ಇದೆಲ್ಲ ನಾಟಕ – ರಮೇಶ ಜಿಗಜಿಣಗಿ
Advertisement
Advertisement
ಲಿವ್ ಇನ್ ಸಂಬಂಧದಲ್ಲಿದ್ದ ಜೋಡಿ ಮಂಗಳವಾರ ರಾತ್ರಿ ಒಟ್ಟಿಗೆ ಪಾರ್ಟಿ ಮಾಡಿತ್ತು. ಈ ಪಾರ್ಟಿಯಲ್ಲಿ ಮದನ್ ಗೆಳತಿಯ ಬಳಿ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ದಾನೆ. ಆದರೆ ಗೆಳತಿ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದಾಳೆ.
Advertisement
ಗೆಳತಿಯ ನಡೆಯಿಂದ ಬೇಸರಗೊಂಡ ಮದನ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಟಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Advertisement