ಬೆಂಗಳೂರು: ಮಂಗಳೂರಿನಲ್ಲಿ ನಡೆದ ಗೋಲಿಬಾರ್ ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದ ವತಿಯಿಂದ 10 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಗೋಲಿಬಾರ್ ಘಟನೆ ಬಗ್ಗೆ ತನಿಖೆಯನ್ನು ಮಾಡಿಸುವುದಾಗಿಯೂ ಸಿಎಂ ಹೇಳಿದ್ದಾರೆ. ಈಗಾಗಲೇ ಕರ್ಫ್ಯೂ ಸಡಿಲಿಸಿದ್ದು ಮಾಜಿ ಸಿಎಂ ಕುಮಾರಸ್ವಾಮಿ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯಗೆ ಮಂಗಳೂರು ಹೋಗದಂತೆ ಯಾರೂ ತಡೆದಿಲ್ಲ. ಬೇಕಾದರೆ ಈವಾಗಲೇ ಮಂಗಳೂರಿಗೆ ಹೋಗಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಪೊಲೀಸ್ ನೊಟೀಸ್
Advertisement
Advertisement
ಪೌರತ್ವ ಕಾಯ್ದೆ ವಿರೋಧಿಸಿ ಗುರುವಾರ ಮಂಗಳೂರಿನಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು, ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು. ಹೀಗಾಗಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಸಾಧ್ಯವಾಗದೆ ಪೊಲೀಸರು ಗೋಲಿಬಾರ್ ನಡೆಸಿದ್ದರು. ಇದೇ ಸಂದರ್ಭದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರಿಗೆ ತೆರಳಿದ್ದ ಸಿಎಂ ಅವರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಇದನ್ನೂ ಓದಿ: ಸಿಎಂಗೆ ಅನುಮತಿ ಇದೆ, ನನಗೆ ಯಾಕಿಲ್ಲ- ಸರ್ಕಾರದ ವಿರುದ್ಧ ಸಿದ್ದು ವಾಗ್ದಾಳಿ