ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು (Bengaluru Metro Pillar Collapse) ತಾಯಿ, ಮಗು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ (Karnataka High Court) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಆ ಮೂಲಕ ರಾಜ್ಯ ಸರ್ಕಾರ, ಬಿಎಂಆರ್‌ಸಿಎಲ್‌ಗೆ (BMRCL) ಕೋರ್ಟ್ ಮಾಸ್ಟರ್ ಸ್ಟ್ರೋಕ್ ಕೊಟ್ಟಿದೆ.
ಮಾಧ್ಯಮಗಳ ಸುದ್ದಿ ಆಧರಿಸಿ ಹೈಕೋರ್ಟ್ ಸ್ವಯಂಪ್ರೇರಿತ ಕೇಸ್ ದಾಖಲಿಸಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಯಾವೆಲ್ಲಾ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ? ಮುಂಜಾಗ್ರತಾ ಕ್ರಮದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆಯೇ ಎಂಬ ಬಗ್ಗೆ ರಿಟ್ ಅರ್ಜಿ ಸಲ್ಲಿಸಲು ರಿಜಿಸ್ಟರ್ ಜನರಲ್‌ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಮೆಟ್ರೋ ದುರಂತ: ತನಿಖೆ ನಡೆಸಿ ವರದಿ ಸಲ್ಲಿಸಿಲು ಐಐಎಸ್‍ಸಿಗೆ ಮನವಿ – ಮತ್ತಷ್ಟು ಅಧಿಕಾರಿಗಳ ತಲೆದಂಡ ಸಾಧ್ಯತೆ
ಘಟನೆಯೇನು?: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ (Bengaluru) ನಾಗವಾರ ರಿಂಗ್ ರಸ್ತೆಯ ಹೆಚ್‍ಬಿಆರ್ ಲೇಔಟ್‍ನಲ್ಲಿ ನಡೆದಿತ್ತು. ಬೆಳಗ್ಗೆ 10:30ರ ಸುಮಾರಿನಲ್ಲಿ ಗದಗ ಮೂಲದ ಸಿವಿಲ್ ಎಂಜಿನಿಯರ್ ಲೋಹಿತ್, ಪತ್ನಿ ಮತ್ತು ಇಬ್ಬರು ಅವಳಿ ಮಕ್ಕಳ ಸಮೇತ ಮನೆಯಿಂದ ಹೊರಟಿದ್ದರು. ಪತ್ನಿಯನ್ನು ಕೆಲಸಕ್ಕೆ, ಇಬ್ಬರು ಮಕ್ಕಳನ್ನು ಡೇ ಕೇರ್‌ನಲ್ಲಿ ಬಿಡಲು ಮಾನ್ಯತಾ ಟೆಕ್‍ಪಾರ್ಕ್ ಕಡೆ ಲೋಹಿತ್ ತೆರಳುತ್ತಿದ್ದಾಗ ಹೆಣ್ಣೂರು ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಎಂದು ಕುಸಿದಿತ್ತು.
ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಬಿಎಂಆರ್‌ಸಿಎಲ್‌ನಿಂದ 20 ಲಕ್ಷ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 10 ಲಕ್ಷ ರೂ. ಪರಿಹಾರ ಘೋಷಿಸಿದರು. ಅಲ್ಲದೇ ಮೆಟ್ರೋ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿರ್ಮಾಣ ಹಂತದಲ್ಲಿರುವ ಮೆಟ್ರೋ ಪಿಲ್ಲರ್ ಕುಸಿದಿದೆ ಎಂಬ ಆರೋಪ ಕೇಳಿಬಂದಿದ್ದರಿಂದ ಮೂವರು ಎಂಜಿನಿಯರ್‌ಗಳನ್ನು ಅಮಾನತು ಮಾಡಲಾಯಿತು. ಜೊತೆಗೆ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ದಾಖಲಿಸುವಂತೆ ಸಿಎಂ ಸೂಚನೆ ನೀಡಿದ್ದರು. ಇದನ್ನೂ ಓದಿ: ಡೆಡ್ಲಿ ಮೆಟ್ರೋಗೆ ಇಬ್ಬರು ಬಲಿ – ಪಿಲ್ಲರ್ ದುರಂತಕ್ಕೆ ಕಾರಣಗಳೇನು?
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k