ಬೆಂಗಳೂರು: ಇಂದು ರಾತ್ರಿ ಬೈಯಪ್ಪನಹಳ್ಳಿ, ಎಂ.ಜಿ ರಸ್ತೆ ಮೆಟ್ರೋ ಸ್ಥಗಿತಗೊಳ್ಳಲಿದೆ. ಇಂದಿರಾನಗರ ನಂತರ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಲ್ಲಿ ಸಿವಿಲ್ ಸರ್ವಿಸ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಎಂಜಿ ರಸ್ತೆ ಮತ್ತು ಬೈಯಪ್ಪನಹಳ್ಳಿವರೆಗೂ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದ್ದು, ಈ ಅವಧಿಯಲ್ಲಿ ಎಂ.ಜಿ ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ಬಿಎಂಆರ್‌ಸಿಎಲ್, ಬೆಂಗಳೂರು ಮೆಟ್ರೋ ರೈಲು ನಿಗಮವು 2022ರ ಏಪ್ರಿಲ್ 23ರಂದು ಶನಿವಾರ ರಾತ್ರಿ 9.30 ಗಂಟೆಯಿಂದ ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದೆ.
Advertisement
ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈತಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು 2022ರ ಏಪ್ರಿಲ್ 23ರಂದು ಶನಿವಾರ ರಾತ್ರಿ 9.30 ಗಂಟೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಗೆ ಮುಂಬೈ ನಂಟು!
Advertisement
Advertisement
ಈ ಅವಧಿಯಲ್ಲಿ ವೇಳಾಪಟ್ಟಿಯ ಪ್ರಕಾರ ಪ್ರಯಾಣಿಕರಿಗೆ ಮೆಟ್ರೋ ಸೇವೆಯು ಎಂ.ಜಿ.ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಲಭ್ಯವಿರುತ್ತದೆ. ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 9.30 ಗಂಟೆಗೆ ಹೊರಡುತ್ತದೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಕಡೆಗೆ ರಾತ್ರಿ 9.30 ಗಂಟೆಗೆ ಹೊರಡುತ್ತದೆ.
Advertisement
ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಹಸಿರು ಮಾರ್ಗದ ರೈಲುಗಳನ್ನು ಸಂಪರ್ಕಿಸಿದ ನಂತರ ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿಗೆ ಕೊನೆಯ ರೈಲು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ರಾತ್ರಿ 9 ಗಂಟೆಗೆ ಹೊರಡಲಿದೆ. ಇದನ್ನೂ ಓದಿ: ಮುಸ್ಲಿಮ್ ಬಾಹುಳ್ಯ ಜಾಗದಲ್ಲಿ ಅಣ್ಣಮ್ಮ ದೇವಿ ಮೆರವಣಿಗೆ – ದಾರಿ ಬದಲಾವಣೆ ಮಾಡುವಂತೆ ಮನವಿ
ಭಾನುವಾರದಂದು ಮೆಟ್ರೋ ಸೇವೆಯು ನೇರಳೆ ಮಾರ್ಗದಲ್ಲಿ ಪೂರ್ಣವಾಗಿ ಬೆಳಗ್ಗೆ 7 ಗಂಟೆಯಿಂದ ವೇಳಾಪಟ್ಟಿಯ ಪ್ರಕಾರ ರೈಲು ಸೇವೆಯು ಈ ಮಾರ್ಗದಲ್ಲಿ ಲಭ್ಯವಿರುತ್ತದೆ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ.