Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಕ್ಫ್ ಆಸ್ತಿ ಕಬಳಿಕೆ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ: ಶಶಿಕಲಾ ಜೊಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಕ್ಫ್ ಆಸ್ತಿ ಕಬಳಿಕೆ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ: ಶಶಿಕಲಾ ಜೊಲ್ಲೆ

Bengaluru City

ವಕ್ಫ್ ಆಸ್ತಿ ಕಬಳಿಕೆ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ: ಶಶಿಕಲಾ ಜೊಲ್ಲೆ

Public TV
Last updated: August 19, 2021 8:11 pm
Public TV
Share
3 Min Read
SHASHIKALA JOLLE
SHARE

– ಮುಜರಾಯಿ ದೇವಸ್ಥಾನಗಳ ಸ್ವಚ್ಛತೆ, ಮೂಲ ಸೌಕರ್ಯಕ್ಕೆ ಆದ್ಯತೆ

ಬೆಂಗಳೂರು: ರಾಜ್ಯದ ವಕ್ಫ್ ಆಸ್ತಿ ಕಬಳಿಕೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ವಕ್ಫ್ ಮತ್ತು ಹಜ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ್ದೇನೆ. ರಾಜ್ಯದಲ್ಲಿ ವಕ್ಫ್ 105885 ಎಕರೆ ಜಮೀನು ಗುರುತಿಸಲಾಗಿದೆ. ರಾಜ್ಯದಲ್ಲಿ 32192 ವಕ್ಫ್ ಆಸ್ತಿ ನೊಂದಣಿಯಾಗಿದೆ. 8480 ಎಕರೆ ಒತ್ತುವರಿಯಾಗಿರುವ ಮಾಹಿತಿ ಇದೆ. ಈ ಬಗ್ಗೆ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಆದಷ್ಟು ಶೀಘ್ರ ಈ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

JOLLE 3

ರಾಜ್ಯದ 149 ತಾಲೂಕುಗಳ ವಕ್ಫ್ ಆಸ್ತಿ ಗೆಜೆಟ್ ಹೊರಡಿಸಲಾಗಿದೆ. ವಕ್ಫ್ ಇಲಾಖೆಯಲ್ಲಿ 355 ಸಿಬ್ಬಂದಿ ಇದ್ದು, ಇನ್ನೂ 84 ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲಾಗುವುದು. ಹಜ್ ಯಾತ್ರೆಗೆ ಪ್ರತಿ ವರ್ಷ ಹೋಗಲು ಅವಕಾಶ ಇದೆ. ಸೌದಿ ಅರೇಬಿಯಾಕ್ಕೆ ಹೋಗಲು ಬೇಕಾದ ಅವಶ್ಯ ಮಾಹಿತಿಯನ್ನು ಹಜ್ ಮಂಡಳಿ ಮಾಡುತ್ತದೆ. 1965 ರಲ್ಲಿ 8 ಜನ ಸದಸ್ಯರನ್ನೊಳಗೊಂಡ ಹಜ್ ಸಮಿತಿ ರಚನೆಯಾಗಿದೆ. 2019-2021 ರಲ್ಲಿ ಕೊವಿಡ್ ಕಾರಣದಿಂದ ಹಜ್ ಯಾತ್ರಿಕರು ಹಜ್ ಪ್ರವಾಸ ಕೈಗೊಂಡಿಲ್ಲ. ಹೀಗಾಗಿ ಹಜ್ ಭವನವನ್ನು ಕೊವಿಡ್ ಕೇರ್ ಸೆಂಟರ್ ಮಾಡಿ ಎಲ್ಲ ಸಮುದಾಯದವರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವೆ ತಿಳಿಸಿದ್ದಾರೆ. ಇದನ್ನೂ ಓದಿ: ವಿಮಾನದಿಂದ ಬಿದ್ದವರ ಗುರುತು ಪತ್ತೆ- ಮೂವರಲ್ಲಿ ಒಬ್ಬ ಯುವ ಫುಟ್‍ಬಾಲ್ ಆಟಗಾರ

ವಕ್ಫ್ ಕಮಿಟಿಯಲ್ಲಿ 105 ಕೋಟಿ ಅನುದಾನ ಇದೆ. ಬಡ ಮುಸ್ಲಿಂ ಸಮುದಾಯದವರಿಗೆ ಶೇ.5 ರಷ್ಟು ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ಮುಸ್ಲಿಂ ಮಹಿಳೆಯರಿಗೆ ಹೃದಯ ಹಾಗೂ ಕ್ಯಾನ್ಸರ್ ರೋಗ ಚಿಕಿತ್ಸೆಗೆ 1 ಲಕ್ಷ ರೂ. ಸಹಾಯಧನ ನೀಡಲಾಗುವುದು. ವಕ್ಫ್ ಮಂಡಳಿಗೆ ಈ ಬಾರಿ 1.74 ಕೋಟಿ ರೂ. ಅನುದಾನ ನೀಡಲಾಗಿದೆ. ವೈದ್ಯಕೀಯ ಚಿಕಿತ್ಸೆಗೆ ಸಹಾಯಧನ ನೀಡುವುದು ವಿಳಂಬವಾಗದಂತೆ ನೋಡಿಕೊಳ್ಳಲಾಗುವುದು. ಈ ಬಗ್ಗೆ ಹೆಚ್ಚಿನ ಪ್ರಚಾರ ಮಾಡಿ ಎಲ್ಲರಿಗೂ ಯೋಜನೆ ತಲುಪಿಸಲು ಪ್ರಯತ್ನ ಮಾಡಲಾಗುವುದು. ವಕ್ಫ್ ಆಸ್ತಿ ಕಬಳಿಕೆ ಕುರಿತು ಅನ್ವರ್ ಮಾನಿಪ್ಪಾಡಿ ನೀಡಿರುವ ವರದಿ ಇನ್ನೂ ನೋಡಿಲ್ಲ. ಈ ಬಗ್ಗೆ ಮಾಹಿತಿ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

JOLLE 2 1

ದೇವಸ್ಥಾನಗಳ ಸ್ವಚ್ಛತೆಗೆ ಆದ್ಯತೆ- ಯಾತ್ರಿ ನಿವಾಸ ನಿರ್ಮಾಣಕ್ಕೆ ಕ್ರಮ:
ರಾಜ್ಯದಲ್ಲಿರುವ ದೇವಸ್ಥಾನಗಳು, ಹೊರ ರಾಜ್ಯದಲ್ಲಿರುವ ದೇವಸ್ಥಾನಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ದೇವಸ್ಥಾನಗಳ ಆಸ್ತಿ ಸಮೀಕ್ಷೆ ಹಾಗೂ ಯಾತ್ರಿ ನಿವಾಸಗಳ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ 34563 ಮುಜರಾಯಿ ದೇವಸ್ಥಾನಗಳಿವೆ. 25 ಲಕ್ಷ ವರಮಾನ ಮೀರಿದ ದೇವಸ್ಥಾನಗಳನ್ನು ಎ ಕೆಟಗೆರಿ, 5 ಲಕ್ಷ ಮೇಲ್ಪಟ್ಟು ವರಮಾನ ಇರುವ ದೇವಸ್ಥಾನಗಳನ್ನು ಬಿ ಹಾಗೂ 5 ಲಕ್ಷ ಕ್ಕಿಂತ ಕಡಿಮೆ ವರಮಾನ.ಇರುವ ದೇವಸ್ಥಾನಗಳನ್ನು ಸಿ ಕೆಟಗೆರಿಯಲ್ಲಿ ವಿಂಗಡಿಸಲಾಗಿದೆ. ಇದಲ್ಲದೇ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚನೆ ಮಾಡಿ 25. ಕೋಟಿ ಮೀಸಲಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: “ಜೋರಾದ ಸದ್ದು ಕೇಳಿಸ್ತು.. ನೋಡಿದ್ರೆ ಮನೆ ಮೇಲೆ ಇಬ್ರು ಬಿದ್ದಿದ್ರು”

ನಮ್ಮ ರಾಜ್ಯದ ದೇವಸ್ಥಾನಗಳಲ್ಲಿ ಸ್ವಚ್ಛತೆ ಮತ್ತು ಮೂಲಭೂತ ಸೌಲಭ್ಯ ಒದಗಿಸುವ ಕೆಲಸ ಮಾಡಲಾಗುವುದು. ರಾಜ್ಯದ ಯಾವ ದೇವಸ್ಥಾನಗಳಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ ಅವಕಾಶ ಇದೆ ಎನ್ನುವುದನ್ನು ವರದಿ ನೀಡಲಿ ಸೂಚಿಸಿದ್ದೇನೆ. ಪಕ್ಕದ ರಾಜ್ಯಗಳಾದ ಆಂಧ್ರ ಪ್ರದೇಶದ ಶ್ರೀಶೈಲಂ, ತಿರುಪತಿ, ಮರಾಹಾಷ್ಟ್ರದ ಫಂಡರಪುರ, ತುಳಜಾಭವಾನಿ, ಗುಡ್ಡಾಪುರ ದಾನಮ್ಮ ದೇವಸ್ಥಾನಗಳಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಲು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಲ್ಲದೇ ಮುಜರಾಯಿ ಇಲಾಖೆಯ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಲು ಸೂಚಿಸಿದ್ದೇನೆ ಎಂದು ತಿಳಿಸಿದರು.

JOLLE 1 1

ಹಿಂದಿನ ಮುಜರಾಯಿ ಸಚಿವರು ಸಪ್ತಪದಿ ಯೋಜನೆ ಜಾರಿಗೆ ತಂದಿದ್ದಾರೆ. ಅದನ್ನು ಮುಂದುವರಿಸಲು ತೀರ್ಮಾನಿಸಲಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಇದರ ಪ್ರಚಾರ ಕಡಿಮೆ ಇದೆ. ಹೆಚ್ಚಿನ ಪ್ರಚಾರ ಮಾಡಿ ಸಪ್ತಪದಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಮುಜರಾಯಿ ಇಲಾಖೆಯಲ್ಲಿಯೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಅಘ್ಘಾನ್ ಕ್ರಿಕೆಟ್ ಮಂಡಳಿ ವಶಕ್ಕೆ ತಾಲಿಬಾನ್ ಕಸರತ್ತು

ಖಾತೆ ಬದಲಾವಣೆಗೆ ಬೇಸರವಿಲ್ಲ:
ಖಾತೆ ಬದಲಾವಣೆಯ ಬಗ್ಗೆ ನನಗೆ ಯಾವುದೇ ಬೇಸರ ಇಲ್ಲ. ಪಕ್ಷದ ನಾಯಕರು ಯಾವ ಜವಾಬ್ದಾರಿ ವಹಿಸುತ್ತಾರೆಯೋ ಅದನ್ನು ನಿಭಾಯಿಸುತ್ತೇನೆ. ನಾನು ಆಧ್ಯಾತ್ಮದಲ್ಲಿ ಇರುವುದರಿಂದ ಮುಜರಾಯಿ ಇಲಾಖೆ ಬಗ್ಗೆ ಬೇಸರ ಇಲ್ಲ. ಹಜ್ ಮತ್ತು ವಕ್ಫ್ ಖಾತೆ ನೀಡಿರುವುದೂ ಖುಷಿ ತಂದಿದೆ. ಎರಡೂ ಇಲಾಖೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆದುಕೊಂಡು ಒಳ್ಳೆಯ ಕೆಲಸ ಮಾಡುತ್ತೇನೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

TAGGED:bengaluruPublic TVShashikala Jolletempleದೇವಸ್ಥಾನಪಬ್ಲಿಕ್ ಟಿವಿಬೆಂಗಳೂರುವಕ್ಫ್ ಆಸ್ತಿಶಶಿಕಲಾ ಜೊಲ್ಲೆ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Strait of Hormuz Indian Ships
Latest

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸಬೇಡಿ: ಇರಾನ್‌

Public TV
By Public TV
19 minutes ago
head cook killed by being attacked with a snooker stick in sagar shivamogga
Crime

ಸ್ನೂಕರ್‌ ಸ್ಟಿಕ್‌ನಲ್ಲಿ ಹಲ್ಲೆ ಮಾಡಿ ಹೆಡ್‌ಕುಕ್‌ ಹತ್ಯೆ – ಶವ ಸಾಗಿಸುವಾಗ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ

Public TV
By Public TV
26 minutes ago
shreyas patel
Latest

ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ: ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರಕ್ಕೆ ಮನವಿ

Public TV
By Public TV
50 minutes ago
Chikkaballapura Car Accident
Chikkaballapur

ಟೆಕ್ಕಿ ದಂಪತಿ ಹೊರಟಿದ್ದ ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸಾವು, ಪತಿ ಸ್ಥಿತಿ ಗಂಭೀರ

Public TV
By Public TV
52 minutes ago
RCB Fans Bengaluru Chinnaswamy
Bengaluru City

ಐಪಿಎಲ್ ನಕಲಿ ಟಿಕೆಟ್ ದಂಧೆಗೆ ಬೆಂಗಳೂರು ಪೊಲೀಸರ ಡಿಜಿಟಲ್ ಬ್ರೇಕ್!

Public TV
By Public TV
2 hours ago
Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?