ಬೆಂಗಳೂರು: ಸಿಲಿಕಾನ್ ಸಿಟಿಯ ಕೋರಮಂಗಲದಲ್ಲಿ ಕಾನೂನು ಬಾಹಿರವಾಗಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಿ ಅಂತ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಜನ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ರಾಮಲಿಂಗಾ ರೆಡ್ಡಿಗೆ ಸಾಲು ಸಾಲು ದೂರನ್ನು ನೀಡಿದ್ದಾರೆ.
Advertisement
ತಮ್ಮ ಕ್ಷೇತ್ರದ ಜನರ ದೂರಿಗೆ ಸ್ಪಂದಿಸಿದ ಶಾಸಕ ರಾಮಲಿಂಗಾ ರೆಡ್ಡಿ, ಕೋರಮಂಗಲದ ಕೆಲ ಬ್ಯೂಟಿ ಪಾರ್ಲರ್ ಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಕೂಡಲೇ ತನಿಖೆ ನಡೆಸಿ, ಅಗತ್ಯ ಕ್ರಮಗೊಳ್ಳಲು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಬಿಬಿಎಂಪಿಯ ವಾರ್ಡ್ ಸಂಖ್ಯೆ 151 ರಲ್ಲಿ ಕಾಲ್ ಗಲ್ರ್ಸ್ ಎಂಬ ಶೀರ್ಷಿಕೆಯೊಂದಿಗೆ ವೆಬ್ ಸೈಟ್ ಮೂಲಕ ಅಕ್ರಮ ದಂಧೆಗಳು ನಡೆಯುತ್ತಿವೆ. ಸಾಕಷ್ಟು ಜನರನ್ನ ಈ ಜಾಲ ವಂಚಿಸುತ್ತಿದೆ. ಜೊತೆಗೆ ಇಂತಹ ದಂಧೆಗಳಿಂದ ಬಿಟಿಎಂ ಲೇಔಟ್ ಕ್ಷೇತ್ರಕ್ಕೂ ಕೆಟ್ಟ ಹೆಸರು ಬರುತ್ತಿದೆ ಅಂತ ಕ್ಷೇತ್ರದ ಜನ, ಶಾಸಕರ ಗಮನಕ್ಕೆ ತಂದಿದ್ದಾರೆ. ಜನರ ದೂರಿಗೆ ಸ್ಪಂದಿಸಿದ ಶಾಸಕರು ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ.
Advertisement
Advertisement
ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಸದ್ದಿಲ್ಲದೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಾದ ಅಧಿಕಾರಿಗಳು ಕೂಡ ಮೌನಕ್ಕೆ ಶರಣಾಗಿದ್ದಾರೆ. ಈ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದರೂ ಪೊಲೀಸ್ ಇಲಾಖೆ ಮಾತ್ರ ಇಂತಹ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಿಲ್ಲ.
Advertisement