ಬೆಂಗಳೂರು: ಬೆಂಗಳೂರು-ಮುಂಬೈ ನಡುವೆ ಉದ್ದೇಶಿತ ಸೂಪರ್‌ಫಾಸ್ಟ್ ರೈಲು ಹುಬ್ಬಳ್ಳಿ ಮೂಲಕ ಸಂಚರಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಖಚಿತಪಡಿಸಿದ್ದಾರೆ.
ಧಾರವಾಡ ಸಂಸದ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಬುಧವಾರ ಬರೆದ ಪತ್ರದಲ್ಲಿ ವೈಷ್ಣವ್, ತುಮಕೂರು ದಾವಣಗೆರೆ, ಹಾವೇರಿ, ಹುಬ್ಬಳ್ಳಿ ಮತ್ತು ಬೆಳಗಾವಿ ಮೂಲಕ ನೂತನ ರೈಲು ಮುಂಬೈ ತಲುಪಲಿದೆ ಎಂದು ತಿಳಿಸಿದ್ದಾರೆ.
ಹೊಸ ರೈಲು ಸಂಚಾರದ ವೇಳಾಪಟ್ಟಿಯನ್ನು ರೈಲ್ವೆ ಇಲಾಖೆ ಶೀಘ್ರವೇ ಬಿಡುಗಡೆ ಮಾಡಲಿದೆ.
ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರ ಮನವಿಗೆ ಪ್ರತಿಕ್ರಿಯೆಯಾಗಿ ಸಚಿವರು ಸೆಪ್ಟೆಂಬರ್ ಅಂತ್ಯದಲ್ಲಿ ರೈಲಿನ ಯೋಜನೆಗಳನ್ನು ಮೊದಲು ಘೋಷಿಸಿದ್ದರು.

