ಬೆಂಗಳೂರು: ಭಾರತದಲ್ಲಿ ಕೋವಿಡ್-19 ಸೋಂಕು ಹರಡುತ್ತಿರುವ 25 ಪ್ರಮುಖ ಸೂಕ್ಷ್ಮ ಕ್ಷೇತ್ರಗಳಲ್ಲಿ ಬೆಂಗಳೂರು ನಗರ ಹಾಗೂ ಮೈಸೂರು ಗುರುತಿಸಲ್ಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ 101 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 8 ಮಂದಿ ಗುಣಮುಖರಾಗಿದ್ದಾರೆ. ಈ ಹಿನ್ನೆಲೆ ಭಾರತದಲ್ಲಿ ಕೋವಿಡ್-19 ಸೋಂಕು ಹರಡುತ್ತಿರುವ 25 ಪ್ರಮುಖ ಸೂಕ್ಷ್ಮ ಕ್ಷೇತ್ರಗಳಲ್ಲಿ ಬೆಂಗಳೂರು ನಗರ ಹಾಗೂ ಮೈಸೂರು ಗುರುತಿಸಲ್ಪಟ್ಟಿದೆ. ಚಿಕ್ಕಬಳ್ಳಾಪುರವನ್ನು ಕೋವಿಡ್-19 ಸೋಂಕು ಹರಡುತ್ತಿರುವ (ಕಳೆದ 14 ದಿನಗಳಲ್ಲಿ) ಹೊಸ ಸೂಕ್ಷ್ಮ ಕ್ಷೇತ್ರಗಳಲ್ಲೊಂದು ಎಂದು ಗುರುತಿಸಲಾಗಿದೆ ಎಂಬ ಮಾಹಿತಿಯನ್ನು ಆರೋಗ್ಯ ಸಚಿವರು ಟ್ವೀಟ್ ಮಾಡಿ ತಿಳಿಸಿದ್ದಾರೆ.
Advertisement
ಭಾರತದಲ್ಲಿ #Covid19 ಸೋಂಕು ಹರಡುತ್ತಿರುವ 25 ಪ್ರಮುಖ ಸೂಕ್ಷ್ಮ ಕ್ಷೇತ್ರಗಳಲ್ಲಿ ಬೆಂಗಳೂರು ನಗರ ಹಾಗೂ ಮೈಸೂರು ಗುರುತಿಸಲ್ಪಟ್ಟಿದೆ.
ಚಿಕ್ಕಬಳ್ಳಾಪುರವನ್ನು #Covid19 ಸೋಂಕು ಹರಡುತ್ತಿರುವ (ಕಳೆದ 14 ದಿನಗಳಲ್ಲಿ) ಹೊಸ ಸೂಕ್ಷ್ಮ ಕ್ಷೇತ್ರಗಳಲ್ಲೊಂದು ಎಂದು ಗುರುತಿಸಲಾಗಿದೆ. https://t.co/ZKQxJa98OO pic.twitter.com/ZaHZDpiMvb
— B Sriramulu (@sriramulubjp) April 1, 2020
Advertisement
ಈವರೆಗೆ ಬೆಂಗಳೂರಿನಲ್ಲಿ 45, ಮೈಸೂರಿನಲ್ಲಿ 14 ಮಂದಿಗೆ ಸೋಂಕು ತಗುಲಿದೆ. ಮಾರ್ಚ್ 30ರವರೆಗಿನ ವರದಿ ಪ್ರಕಾರ, ಭಾರತದ 7 ರಾಜ್ಯದಲ್ಲಿ ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ. ದೆಹಲಿ, ಜಮ್ಮು ಮತ್ತು ಕಾಶ್ಮೀರ, ಆಂಧ್ರ ಪ್ರದೇಶ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಕೋವಿಡ್-19 ಅಟ್ಟಹಾಸ ಮೆರೆಯುತ್ತಿದೆ.
Advertisement
Advertisement
ಭಾರತದಲ್ಲಿ ಶೇ. 80ರಷ್ಟು ಪ್ರಕರಣಗಳು ಮಹಾರಾಷ್ಟ್ರ, ಕೇರಳ, ಉತ್ತರ ಪ್ರದೇಶ, ದೆಹಲಿ, ಜಮ್ಮಿ ಮತ್ತು ಕಾಶ್ಮೀರ್, ಕರ್ನಾಟಕ, ತೆಲಂಗಾಣ, ಗುಜರಾತ್, ತಮಿಳುನಾಡು, ಪಂಜಾಬ್ ರಾಜ್ಯದಲ್ಲಿ ವರದಿಯಾಗುತ್ತಿದೆ. ಭಾರತದಲ್ಲಿ ಒಟ್ಟು 1,590 ಮಂದಿಗೆ ಸೋಂಕು ತಗುಲಿದ್ದು, 45 ಮಂದಿ ಸಾವನ್ನಪ್ಪಿದ್ದಾರೆ.