ಮಂಡ್ಯ: ಇಂದು ಅಥವಾ ನಾಳೆ ಮದ್ದೂರು ಬೈಪಾಸ್ (Madduru ByPasse) ಸಂಚಾರಕ್ಕೆ ಮುಕ್ತವಾಗಲಿದ್ದು, ಐದಾರು ದಿನ ತಡವಾಗಿದ್ದಕ್ಕೆ ಸಂಸದ ಪ್ರತಾಪ್ ಸಿಂಹ (Pratap Simha) ಜನರ ಕ್ಷಮೆ ಕೋರಿದ್ದಾರೆ.
ನವೆಂಬರ್ ಅಂತ್ಯದ ವೇಳೆ ಮದ್ದೂರು ಬೈಪಾಸ್ ಓಪನ್ ಆಗುತ್ತೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ರು. ಆದ್ರೆ ಐದಾರು ದಿನ ಮಳೆಯಿಂದ ಬೈಪಾಸ್ ಕಾಮಗಾರಿ ತಡವಾಗಿದೆ. ಎಕ್ಸ್ ಪೆಂಕ್ಷನ್ ಜಾಯಿಂಟ್ ಕೆಲಸ ಮುಕ್ತಾಯವಾಗಿದೆ ಸೇಫ್ಟಿ ಆಡಿಟಿಂಗ್, ಲೋಡ್ ಟೆಸ್ಟಿಂಗ್, ಮಾರ್ಕಿಂಗ್ ಕೂಡ ಮುಗಿದಿದೆ. ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ್ರೆ ಮೈ-ಬೆಂ ಸಂಚರಿಸುವವರಿಗೆ ಕನಿಷ್ಠ 15-20 ನಿಮಿಷ ಉಳಿಯುತ್ತೆ ಎಂದು ಪ್ರತಾಪ್ ಸಿಂಹ ಫೇಸ್‍ಬುಕ್ ಲೈವ್ ಮೂಲಕ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ಚುನಾವಣೆಗೆ ಹಿಂದುತ್ವ, ದೇಶಾಭಿಮಾನವೇ ಬಿಜೆಪಿ ತಂತ್ರ- ಸಚಿವರಿಗೆ ಹೈಕಮಾಂಡ್ ಟಾಸ್ಕ್ ಡೆಡ್ ಲೈನ್
— Pratap Simha (@mepratap) December 5, 2022
ಕೆಲವೇ ದಿನಗಳಲ್ಲಿ ಶ್ರೀರಂಗಪಟ್ಟಣ ಬೈಪಾಸ್ ಕೂಡ ಓಪನ್ ಆಗಲಿದ್ದು, ಹನಕರೆ, ಯಲಿಯೂರು, ಇಂಡವಾಳು ಸೇರಿದಂತೆ ಹಲವಡೆ ಅಂಡರ್ ಪಾಸ್ ಕಾಮಗಾರಿ ಆಗಬೇಕಿದೆ. ಮೈ-ಬೆಂ ದಶಪಥ ರಸ್ತೆ ಕಾಮಗಾರಿ ಪೂರ್ಣ ಆಗಲು ಇನ್ನು ಎರಡು ತಿಂಗಳು ಬೇಕಿದೆ ಎಂದು ಮದ್ದೂರು ಫ್ಲೈಓವರ್ ಮೇಲೆ ಸಂಚರಿಸಿ ಫೇಸ್‍ಬುಕ್ ಲೈವ್ ಮೂಲಕ ದಶಪಥ ಹೆದ್ದಾರಿ ಬಗ್ಗೆ ಪ್ರತಾಪ್ ಸಿಂಹ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಉಗ್ರ ಶಾರೀಕ್‍ಗೆ ಹರಿದು ಬರುತ್ತಿತ್ತು ಡಾಲರ್ ಮನಿ – ಕರೆನ್ಸಿ ವರ್ಗಾಯಿಸಿದ 40ಕ್ಕೂ ಅಧಿಕ ಜನರ ವಿಚಾರಣೆ