ರಾಮನಗರ: ಬೆಂಗಳೂರು-ಮೈಸೂರು (Bengaluru- Mysuru ExpressWay) ದಶಪಥ ಹೆದ್ದಾರಿಯಲ್ಲಿ ಮತ್ತೆ ಮಳೆ ಅವಾಂತರ ಸೃಷ್ಠಿಯಾಗಿದ್ದು ಹೆದ್ದಾರಿ ಜಲಾವೃತವಾಗಿದೆ.
Advertisement
ರಾಮನಗರ ಸಮೀಪದ ಸಂಘಬಸವನ ದೊಡ್ಡಿ ಗ್ರಾಮದ ಸಮೀಪ ಹೆದ್ದಾರಿಯಲ್ಲಿ ಮಳೆ (Rain) ನೀರು ನಿಂತಿದ್ದು ವಾಹನಸವಾರರು ಪರದಾಟ ನಡೆಸಿದ್ದಾರೆ. ಕೆಲ ವಾಹನಗಳು ಕೆಟ್ಟು ನಿಂತಿದ್ದು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಹಿಡಿಶಾಪ ಹಾಕಿದ್ದಾರೆ. ದುಬಾರಿ ಟೋಲ್ ವಸೂಲಿ ಮಾಡುವ ಹೆದ್ದಾರಿ ಪ್ರಾಧಿಕಾರ ಸರಿಯಾಗಿ ಮಳೆ ನೀರು ಆಚೆ ಹೋಗುವ ವ್ಯವಸ್ಥೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೀದರ್‌ನಲ್ಲಿ 9 ವರ್ಷದ ಬಳಿಕ ಆಲಿಕಲ್ಲು ಮಳೆ – ಕಲಬುರಗಿಯಲ್ಲಿ ಮಳೆಗೆ ಬೆರಗಾದ ಜನ
Advertisement
Advertisement
ಮಳೆನೀರು ಸರಾಗವಾಗಿ ಹರಿದುಹೋಗದೆ ಅವಾಂತರ ಸೃಷ್ಟಿಯಾಗಿದ್ದು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಮಳೆ ನೀರಿಗೆ ಕೆಟ್ಟುನಿಂತ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ, ಕಾರಿನಲ್ಲಿದ್ದವರು ಅನಾಹುತದಿಂದ ಪಾರಾಗಿದ್ದಾರೆ. ಹೆದ್ದಾರಿ ಪ್ರಾಧಿಕಾರಕ್ಕೆ ಕರೆ ಮಾಡಿದ್ರೂ ಅಧಿಕಾರಿಗಳು ನೆರವಿಗೆ ಬರಲಿಲ್ಲ. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಸರ್ಕಾರ ಹಾಗೂ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಕಿಡಿಕಾರಿದ್ದಾರೆ.