ಮೈಸೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru-Mysuru Expressway) ಸರ್ವಿಸ್ ರಸ್ತೆಗಳ ಕಾಮಗಾರಿ ಪೂರ್ಣವಾಗುವವರೆಗೆ ಸುಂಕ ವಸೂಲಾತಿಯನ್ನು (Toll Collection) ಮುಂದೂಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿರ್ಧರಿಸಿದೆ.
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ (Pratap Simha) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಸರ್ವಿಸ್ ರಸ್ತೆ (Service Road) ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ನಿರ್ಧಾರವನ್ನು ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
Advertisement
Advertisement
ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣವಾಗದೇ ಇದ್ದರೂ ಸುಂಕ ವಸೂಲಾತಿ ಮಾಡಲು ತೀರ್ಮಾನ ಕೈಗೊಂಡಿದ್ದಕ್ಕೆ ಜನಸಾಮಾನ್ಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಇದನ್ನೂ ಓದಿ:ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಟೋಲ್ ಸಂಗ್ರಹ – ಯಾವ ವಾಹನಕ್ಕೆ ಎಷ್ಟು ದರ?
Advertisement
ಸುಮಾರು 8000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ (Bangalore Mysore Expressway) ಮೊದಲ ಹಂತದ 55.63 ಕಿ.ಮೀ ರಸ್ತೆ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶುಲ್ಕ ವಸೂಲಾತಿ ಕುರಿತು ಕೇಂದ್ರ ಹೆದ್ದಾರಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿತ್ತು.
Toll collection, Deferred till the completion of service roads. pic.twitter.com/kDWIMvt5y9
— Pratap Simha (@mepratap) February 27, 2023
ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 11ರಂದು ನೂತನ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿಯೇ ಎರಡನೇ ಹಂತದ ಕಾಮಗಾರಿಯು ಮುಕ್ತವಾಗಲಿದೆ ಎಂದು ಹೇಳಲಾಗುತ್ತಿದೆ.
ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಮೊದಲ ಹಂತದ ಟೋಲ್ ಕೇಂದ್ರಗಳು ಕಾರ್ಯಾರಂಭ ಮಾಡಲಿವೆ ಎಂದು ಎನ್‌ಎಚ್‌ಎಐ ಪ್ರಕಟಣೆ ಹೊರಡಿಸಿತ್ತು.