ನವದೆಹಲಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru-Mysuru Expressway) ಕರ್ನಾಟಕದ (Karnataka) ಬೆಳವಣಿಗೆಗೆ ಪೂರಕವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಈ ದಶಪಥ ಹೆದ್ದಾರಿ ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ ನೀಡುವ ಪ್ರಮುಖ ಸಂಪರ್ಕ ಯೋಜನೆಯಾಗಿದೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಬಳಿಕ ಏರಿಕೆಯಾಗಿದ್ದ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಬೆಲೆ ಭಾರೀ ಇಳಿಕೆ
Advertisement
An important connectivity project which will contribute to Karnataka’s growth trajectory. https://t.co/9sci1sVSCB
— Narendra Modi (@narendramodi) March 10, 2023
Advertisement
ಶ್ರೀರಂಗಪಟ್ಟಣ, ಕೊಡಗು, ಊಟಿ ಮತ್ತು ಕೇರಳಕ್ಕೆ ಉತ್ತಮ ಸಾರಿಗೆ ಸಂಪರ್ಕ ಸಾಧಿಸಲು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸಹಕಾರಿಯಾಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದರು.
Advertisement
“ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯು ನಾಲ್ಕು ರೈಲು ಮೇಲ್ಸೇತುವೆಗಳು, ಒಂಭತ್ತು ಸೇತುವೆಗಳು, 40 ಸಣ್ಣ ಸೇತುವೆಗಳು, 89 ಅಂಡರ್‌ಪಾಸ್‌ಗಳು ಮತ್ತು ಮೇಲ್ಸೇತುವೆಗಳ ಅಭಿವೃದ್ಧಿಯನ್ನು ಒಳಗೊಂಡಿರುತ್ತದೆ” ಎಂದು ಗಡ್ಕರಿ ಟ್ವೀಟ್ ಮಾಡಿ ತಿಳಿಸಿದ್ದರು. ಇದನ್ನು ಪ್ರಧಾನಿ ಮೋದಿ ರೀಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಭಾರತದ ಏಕತೆಗೆ ರಾಹುಲ್ ಗಾಂಧಿ ಅಪಾಯಕಾರಿ – ಕಿರಣ್ ರಿಜಿಜು
Advertisement
ಇದೇ ಮಾ.12 ರಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಲಿದ್ದಾರೆ.