ಮಂಡ್ಯ: ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru Mysuru Exprpessway) ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಮಂಡ್ಯ (Mandya) ಜಿಲ್ಲೆಯ ವ್ಯಾಪ್ತಿಯ ಹೆದ್ದಾರಿಯಲ್ಲಿ ಮಂಡ್ಯ ಎಸ್‌ಪಿ ಯತೀಶ್ ಜೊತೆಗೆ ಪರಿಶೀಲನೆ ನಡೆಸಿದರು. ಇನ್ನು ಮುಂದೆ ಟೋಲ್‌ನಲ್ಲಿ ಡ್ರಿಂಕ್ ಆಂಡ್ ಡ್ರೈವ್ ತಪಾಸಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಅಪಘಾತಗಳಿಗೆ ಕಾರಣ ಏನು? ಯಾವ ಕಾರಣದಿಂದ ಪ್ರತಿನಿತ್ಯ ಅಪಘಾತಗಳು ಜರುಗುತ್ತಿವೆ? ಎಂದು ಅಪಘಾತ ನಡೆದ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಅಲೋಕ್ ಕುಮಾರ್ ಅವರಿಗೆ ಸ್ಥಳೀಯರು ಇಲ್ಲಿನ ಸಮಸ್ಯೆಗಳ ಬಗ್ಗೆ ಹೇಳಿದರು.
ಭಾನುವಾರ ಬಂದರೆ ರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡು ಕುಡಿಯುವವರ ಸಂಖ್ಯೆ ಹೆಚ್ಚಾಗಿದೆ. ಹೆದ್ದಾರಿಯನ್ನು ಜನರು ಮಿನಿ ಬಾರ್ ಮಾಡಿಕೊಂಡಿದ್ದಾರೆ. ಸರ್ವಿಸ್ ರಸ್ತೆಯನ್ನು ಸರಿಯಾಗಿ ಮಾಡಿಲ್ಲ, ಚರಂಡಿ ವ್ಯವಸ್ಥೆ ಸರಿಯಾಗಿ ಮಾಡದ ಕಾರಣ ನನ್ನ ಗುಡಿಸಲಿಗೆ ನೀರು ಬರ್ತಾ ಇದೆ ಸ್ವಾಮಿ. ದಯಮಾಡಿ ಸರಿಮಾಡಿಸಿ ಕೊಡಿ ಎಂದು ವೃದ್ಧೆಯೊಬ್ಬರು ಎಡಿಜಿಪಿಗೆ ಕೈಮುಗಿದು ಕೇಳಿಕೊಂಡರು.
ಈ ತಪಾಸಣೆ ವೇಳೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜೊತೆಗೆ ಇದ್ದು ಆಗಿರುವ ಸಮಸ್ಯೆಗಳನ್ನು ಆದಷ್ಟು ಬೇಗ ಸರಿಪಡಿಸಬೇಕೆಂದು ಅಲೋಕ್ ಕುಮಾರ್ ಸೂಚನೆ ನೀಡಿದರು. ಇದನ್ನೂ ಓದಿ: ಲಾರಿ ಆಟೋಗಳ ಮಧ್ಯೆ ಭೀಕರ ಅಪಘಾತ 6 ಸಾವು
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಅತಿಯಾದ ವೇಗ ಅಪಘಾತಗಳಿಗೆ ಕಾರಣವಾಗಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದಲೂ ಹಲವು ಸಮಸ್ಯೆಗಳು ಆಗಿವೆ. ಈ ಬಗ್ಗೆ ಅಧಿಕಾರಿಗಳಿಗೆ ಈ ಸಮಸ್ಯೆಗಳನ್ನು ಸರಿಪಡಿಸಲು ಹೇಳಿದ್ದೇವೆ. ಇನ್ನೂ ಮುಂದೆ ಟೋಲ್‌ನಲ್ಲಿ ಡ್ರಿಂಕ್ ಆಂಡ್ ಡ್ರೈವ್ ತಪಾಸಣೆ ಮಾಡಲಾಗುತ್ತದೆ. ಸದ್ಯ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ 64 ಮಂದಿ ಹಾಗೂ ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ 58 ಜನರು ಸಾವನ್ನಪ್ಪಿದ್ದಾರೆ. ಚಾಲಕರು ಸಹ ಜಾಗರೂಕತೆಯಿಂದ ವಾಹನವನ್ನು ಚಲಾಯಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸುಧಾಕರ್ ಮಾನನಷ್ಟ ಮೊಕದ್ದಮೆ
Web Stories