ಬೆಂಗಳೂರು: ನಮ್ಮ ಮೆಟ್ರೋ (Namma Metro) ನೇರಳೆ ಮಾರ್ಗದಲ್ಲಿರುವ (Purple Line) ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ (Baiyappanahalli Metro Station) ಗುರುವಾರ ರಾತ್ರಿ ಸಂಭವಿಸಬಹುದ ಭಾರೀ ಅನಾಹುತವೊಂದು ತಪ್ಪಿದೆ.
ರಾತ್ರಿ 9 ಗಂಟೆ ಸುಮಾರಿಗೆ ತಾಯಿಯೊಂದಿಗೆ ಪ್ಲಾಟ್‌ಫಾಂನಲ್ಲಿ ಆಟವಾಡುತ್ತಿದ್ದ 4 ವರ್ಷದ ಬಾಲಕ ಇದ್ದಕ್ಕಿದ್ದಂತೆ ಟ್ರ್ಯಾಕ್ ಮೇಲೆ ಜಿಗಿದಿದ್ದಾನೆ. ಕೂಡಲೇ ಮೆಟ್ರೋ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಅಪಾಯದಿಂದ ಬಾಲಕ ಪಾರಾಗಿದ್ದಾನೆ. ಇದನ್ನೂ ಓದಿ: MUDA Scam | ಸರ್ಕಾರ Vs ರಾಜಭವನ – ರಾಜ್ಯಪಾಲರ ಮುಂದಿರುವ ಆಯ್ಕೆಗಳೇನು?
ಮಗು ಬಿದ್ದ ಕೂಡಲೇ ಮೆಟ್ರೋ ಟ್ರ‍್ಯಾಕ್‌ನ ವಿದ್ಯುತ್ ಸಂಚಾರವನ್ನು ಸ್ಥಗಿತಗೊಳಿಸಿ ರಕ್ಷಣೆ ಮಾಡಲಾಗಿತ್ತು. ಮಗುವಿಗೆ ಸಣ್ಣ ಪುಟ್ಟ ತರಚಿದ ಗಾಯವಾಗಿದ್ದು, ಯಾವುದೇ ಸಮಸ್ಯೆಯಾಗಿಲ್ಲ. ಮೆಟ್ರೋ ಸಿಬ್ಬಂದಿ ಜೊತೆಗೆ ಮಗುವನ್ನು ಸ್ಥಳೀಯ ಆಸ್ಪತ್ರೆ ಕಳುಹಿಸಲಾಗಿದೆ. ಇದನ್ನೂ ಓದಿ: ಸೈನಿಕರಿಗೆ ಸೆಲ್ಯೂಟ್: ಕೇವಲ 16 ಗಂಟೆಯಲ್ಲಿ 24 ಟನ್ ಸಾಮರ್ಥ್ಯದ 190 ಅಡಿ ಉದ್ದದ ಸೇತುವೆ ರೆಡಿ!
ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದ ಪರಿಣಾಮ 8 ನಿಮಿಷ ಮೆಟ್ರೋ ಸಂಚಾರ ವ್ಯತ್ಯಯವಾಗಿತ್ತು. ರಾತ್ರಿ 9 ಗಂಟೆ 8 ನಿಮಿಷದಿಂದ 9 ಗಂಟೆ 16 ನಿಮಿಷದ ವರೆಗೆ ಮೆಟ್ರೋ ಸಂಚಾರವನ್ನು ಬಂದ್ ಮಾಡಲಾಗಿತ್ತು. ಇದರಿಂದಾಗಿ 2 ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ಎಂದಿನಂತೆ ಮೆಟ್ರೋ ಸಂಚಾರ ಆರಂಭವಾಗಿತ್ತು.