ಬೆಂಗಳೂರು: ಬಿಎಂಟಿಸಿ (BMTC), ಕೆಎಸ್ಆರ್ಟಿಸಿ (KSRTC) ಪ್ರಯಾಣ ದರ ಏರಿಕೆ ಬೆನ್ನಲ್ಲೆ ಮೆಟ್ರೋ (Namma Metro) ದರ ಏರಿಕೆ ಶಾಕ್ ಕೂಡ ಇಂದೇ (ಶುಕ್ರವಾರ) ನಿಗದಿಯಾಗುವ ಸಾಧ್ಯತೆ ಇದೆ.
ಮೆಟ್ರೋ ದರ ಪರಿಷ್ಕರಣೆ ಪ್ರಕ್ರಿಯೆ ಕೊನೆಯ ಹಂತಕ್ಕೆ ತಲುಪಿದೆ. ಈ ಸಂಬಂಧ ಬಿಎಂಆರ್ಸಿಎಲ್ (BMRCL) ಅಧಿಕಾರಿಗಳ ಮತ್ತು ಫೇರ್ ಹೈಕ್ ಕಮಿಟಿಯ ಹೈವೊಲ್ಟೇಜ್ ಸಭೆ ನಡೆಯಲಿದೆ. ಸಭೆಯಲ್ಲಿ ದರ ಏರಿಕೆ ಫೈನಲ್ ಆಗುವ ಸಾಧ್ಯತೆ ಇದೆ. ಸಭೆಯಲ್ಲಿ ದರ ಏರಿಕೆ, ಜೊತೆಗೆ ಪರಿಷ್ಕೃತ ದರ ನಿಗದಿ ದಿನಾಂಕ ಕೂಡ ಫೈನಲ್ ಆಗುವ ಸಾಧ್ಯತೆ ಇದೆ.
Advertisement
ಕಳೆದ ಏಳು ವರ್ಷದಿಂದ ಮೆಟ್ರೋ ಪ್ರಯಾಣ ದರ ಏರಿಕೆ ಆಗಿರಲಿಲ್ಲ. ಈಗ ದರ ಏರಿಕೆಗೆ ಮುಂದಾಗಿರುವ ಬಿಎಂಆರ್ಸಿಎಲ್ ದರ ಏರಿಕೆ ಫೈನಲ್ ಮಾಡುವ ನಿಟ್ಟಿನಲ್ಲಿ ಬೋರ್ಡ್ ಮಿಟಿಂಗ್ ಮಾಡಲಿದೆ. ಬೆಳಗ್ಗೆ 10 ಗಂಟೆಗೆ ಫೇರ್ ಹೈಕ್ ಫಿಕ್ಸೆಷನ್ ಕಮಿಟಿ ಜೊತೆ ಬಿಎಂಆರ್ಸಿಎಲ್ ಅಧಿಕಾರಿಗಳು ಕೂಡ ಭಾಗಿಯಾಗಿ ಫೈನಲ್ ಮಾಡುವ ಸಾಧ್ಯತೆ ಇದೆ. ಸದ್ಯ ಈಗಾಗಲೇ ದರ ಏರಿಕೆ ಸಂಬಂಧ ಕಮಿಟಿ 40% ರಿಂದ 45% ಏರಿಕೆಗೆ ಚಿಂತನೆ ನಡೆಸಿದೆ.
Advertisement
Advertisement
ಫೇರ್ ಹೈಕ್ ಫಿಕ್ಸೆಷನ್ ಕಮಿಟಿ ಸಿಂಗಾಪುರ, ಹಾಂಕಾಂಗ್, ದೆಹಲಿಗೆ ತೆರಳಿ ಅಲ್ಲಿನ ಮೆಟ್ರೋ ದರ ಪರಿಷ್ಕರಣೆ ಕ್ರಮ, ದರ ಹೆಚ್ಚಳವನ್ನು ಅಧ್ಯಯನ ಮಾಡಿ ದರ ಪರಿಷ್ಕರಣೆ ವರದಿ ಸಿದ್ಧಪಡಿಸಿದೆ. 2017 ರಲ್ಲಿ ಶೇಕಾಡ 10% -15%ರಷ್ಟು ಮೆಟ್ರೋ ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ರೈಲು ಮುಂದಿನ ಐದು ವರ್ಷದಲ್ಲಿ 220 ಕಿಮೀ ನಷ್ಟು ವಿಸ್ತರಣೆಯಾಗಲಿದೆ. ಮೆಟ್ರೋ ಕಾಮಗಾರಿಗಾಗಿ ವಿವಿಧ ಬ್ಯಾಂಕ್, ಏಜೆನ್ಸಿಗಳಿಗೆ ಪಾವತಿಸಬೇಕಾದ ಸಾಲದ ಮೇಲಿನ ಬಡ್ಡಿ, ಪ್ರಸ್ತುತ ರೈಲುಗಳ ಕಾರ್ಯಾಚರಣೆ ವೆಚ್ಚ, ನಿರ್ವಹಣೆ ಮತ್ತು ಸಿಬ್ಬಂದಿ ವೇತನ ಮತ್ತಿತರ ವಿವಿಧ ವೆಚ್ಚ ಪ್ರತಿ ವರ್ಷ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ 15%-20% ರಷ್ಟು ದರ ಏರಿಕೆ ಅನಿವಾರ್ಯ ಎಂಬುದಾಗಿ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ.
Advertisement
ಪ್ರಸ್ತುತ, ದರಗಳು ಒಂದು ನಿಲ್ದಾಣದಿಂದ ಮತ್ತೊಂದು ನಿಲ್ದಾಣಕ್ಕೆ ಕನಿಷ್ಠ ದರ ಈ 10, ಗರಿಷ್ಠ ದರ 60 ರೂಪಾಯಿವರೆಗೆ ಇದೆ. ಜತೆಗೆ, ಸ್ಮಾರ್ಟ್ ಕಾರ್ಡ್ಗಳು ಮತ್ತು ಕ್ಯೂಆರ್ ಕೋಡ್ ಟಿಕೆಟ್ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಸಂಬಂಧ ರಚಿಸಿದ್ದ ಸಮಿತಿ ಸಹ ತನ್ನ ವರದಿ ನೀಡಿದೆ. ದರ ಎಷ್ಟು ಹೆಚ್ಚಿಸಬೇಕು, ಸಾಧಕ, ಬಾಧಕಗಳೇನು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ.