ಬೆಂಗಳೂರು: ಸಿಲಿಕಾನ್ ಸಿಟಿಯ ನಮ್ಮ ಮೆಟ್ರೋ(Metro Rail) ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತವಾಗಲಿದೆ. ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ರೈಲು ಸಂಚಾರ ಇರುವುದಿಲ್ಲ. ಬೆಂಗಳೂರು ಮೆಟ್ರೋ ರೈಲು ನಿಗಮ ಇಂದು ಈ ಕುರಿತು ಪ್ರಕಟಣೆ ಹೊರಡಿಸಿದೆ.
Advertisement
ಅಕ್ಟೋಬರ್ 9ರ ಸಂಜೆ 4 ಗಂಟೆಯಿಂದ ಅಕ್ಟೋಬರ್ 10ರ ಬೆಳಗ್ಗೆ 6 ಗಂಟೆ ತನಕ ಎಂ.ಜಿ.ರಸ್ತೆ-ಬೈಯಪ್ಪನಹಳ್ಳಿ ನಡುವೆ ರೈಲು ಸಂಚಾರ ರದ್ದುಗೊಳ್ಳಲಿದೆ ಎಂದು ಮಾಹಿತಿ ನೀಡಿದೆ. ಇದನ್ನೂ ಓದಿ: ಡಿಎಪಿ,ಪೊಟ್ಯಾಷ್‍ಗಾಗಿ ರಾಜ್ಯದಿಂದ ಕೇಂದ್ರಕ್ಕೆ ಬೊಮ್ಮಾಯಿ ಮನವಿ
Advertisement
Advertisement
ಅಕ್ಟೋಬರ್ 9ರಂದು ನೇರಳೆ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ಮೆಟ್ರೋ ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ರೈಲು ಸಂಚಾರ ನಡೆಸುವುದಿಲ್ಲ. ಇದನ್ನೂ ಓದಿ: ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪತಿ ಮೇಲೆ ಅನುಮಾನ
Advertisement
ಎಂ.ಜಿ.ರಸ್ತೆ-ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಅಕ್ಟೋಬರ್ 10ರ ಭಾನುವಾರ ಬೆಳಗ್ಗೆ 6 ಗಂಟೆ ಬಳಿಕ ಮೆಟ್ರೋ ಸಂಚಾರ ಎಂದಿನಂತೆ ಇರಲಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಈ ಅವಧಿಯಲ್ಲಿ ನೇರಳೆ ಮಾರ್ಗದಲ್ಲಿ ಎಂ.ಜಿ.ರಸ್ತೆ-ಕೆಂಗೇರಿ ತನಕ ಎಂದಿನಂತೆ ಮೆಟ್ರೋ ರೈಲುಗಳು ಸಂಚಾರ ನಡೆಸಲಿವೆ. ಹಸಿರು ಮಾರ್ಗದಲ್ಲಿನ ರೈಲು ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು(BMRCL) Bangalore Metro Rail Corporation Limited ಹೇಳಿದೆ. ಇದನ್ನೂ ಓದಿ: ಫ್ಯಾಬ್ರಿಕ್ ಗೋಡೌನ್‍ನಲ್ಲಿ ಬೆಂಕಿ – ಸ್ಥಳಕ್ಕೆ ಆಗಮಿಸಿದ 18 ಅಗ್ನಿ ಶಾಮಕ ವಾಹನ