ಬೆಂಗಳೂರು: ಹೆಚ್‌ಎಎಲ್ ವಿಮಾನ ನಿಲ್ದಾಣವನ್ನು (HAL Airport) ಆದಷ್ಟು ಬೇಗ ತೆರೆಯಬೇಕು ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ಆಗ್ರಹಿಸಿದ್ದಾರೆ.
ಬೆಂಗಳೂರು ದಕ್ಷಿಣ ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ (Airport) ತೆರೆಯಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದಂತೆ ತೇಜಸ್ವಿ ಸೂರ್ಯ ಅವರಿಂದ ಈ ಅಭಿಪ್ರಾಯ ವ್ಯಕ್ತವಾಗಿದೆ. ಇದನ್ನೂ ಓದಿ: ಕಗ್ಗಲೀಪುರದಲ್ಲಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ?
ಹೊಸ ಎರಡನೇ ವಿಮಾನ ನಿಲ್ದಾಣಕ್ಕಾಗಿ ನಾವು ಕಾಯುತ್ತಿರುವಾಗ ಹೆಚ್‌ಎಎಲ್‌ನಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಸಾರ್ವಜನಿಕ ಮೂಲಸೌಕರ್ಯವನ್ನು ವ್ಯರ್ಥ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಇದರಿಂದ ಸಾವಿರಾರು ಪ್ರಯಾಣಿಕರು ಪ್ರಯೋಜನ ಪಡೆಯುತ್ತಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗುವ ದೀರ್ಘ ಪ್ರಯಾಣ ಇದರಿಂದ ಉಳಿತಾಯವಾಗುತ್ತದೆ ಎಂದಿದ್ದಾರೆ.