-ಅಧಿಕಾರಿಗಳೇ ಕೆಲಸ ಮಾಡಿಕೊಡಿ
ಬೆಂಗಳೂರು/ನೆಲಮಂಗಲ: ಕಳೆದ ಒಂದೂವರೆ ವರ್ಷದಿಂದ ಸರ್ಕಾರಿ ಕಚೇರಿಗೆ ಅಲೆದು ಅಲೆದು ಸುಸ್ತಾದ ವ್ಯಕ್ತಿಯೊಬ್ಬರು ಮೈತುಂಬಾ ನಾಮಫಲಕ ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕು ಕಚೇರಿಯಲ್ಲಿ ಈ ಘಟನೆ ನಡೆದಿದೆ.
ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲವೆಂದು ಶಶಿಧರ್ ಕೊರವೆ ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದ ಶಶಿಧರ್ ಕೊರವೆ ಕಳೆದ ಎರಡು ವರ್ಷಗಳಿಂದ ಜಮೀನಿನ ವಿಚಾರಕ್ಕಾಗಿ ಎರಡನೂರಕ್ಕೂ ಅಧಿಕ ಬಾರಿ ಅಲೆದಾಟ ನಡೆಸಿದ್ದಾರೆ. ಕೆಲ ಅಧಿಕಾರಿಗಳು ತಮ್ಮಿಂದ ಹಣ ಪಡೆದು ಕೆಲಸ ಮಾಡಿಕೊಟ್ಟಿಲ್ಲ ಎಂದು ಶಶಿಧರ್ ಆರೋಪಿಸಿದ್ದಾರೆ.
ಇದರಿಂದ ಬೇಸತ್ ಶಶಿಧರ್, ಇಂದು ಅಧಿಕಾರಿಗಳೇ ಕೆಲಸ ಮಾಡಿಕೊಡಿ. ಕೊಟ್ಟ ಮಾತನ್ನು ಉಳಿಸಿಕೊಳ್ಳಿ, ನ್ಯಾಯಾ ಬೇಕು ಎಂದು ವಿವಿಧ ಬರಹವುಳ್ಳ ಫಲಕಗಳನ್ನು ಕೊರಳಿಗೆ ಹಾಕಿಕೊಂಡು ನೆಲಮಂಗಲ ತಾಲೂಕು ತಹಶೀಲ್ದಾರ್ ಶ್ರೀನಿವಾಸಯ್ಯ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೋಡಿ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಮುಜುಗರಕ್ಕೆ ಒಳಾಗಾಗಿದರು. ಕೊನೆಗೆ ತಹಶೀಲ್ದಾರ್ ಮನವಿ ಸ್ವೀಕರಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.