ಬೆಂಗಳೂರು: ಕಳೆದ ಇಪ್ಪತ್ತು ದಿನದ ಹಿಂದೆ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ನೆಲಮಂಗಲ, ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯ ಫ್ಲೈ ಓವರ್ ರಸ್ತೆಯು ಇನ್ನೂ ಒಂದು ವಾರದಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ.
ನಾಗಸಂದ್ರ, ದಾಸರಹಳ್ಳಿಯ ನಡುವಿನ ಫ್ಲೈ ಓವರ್ ರಸ್ತೆಯ ಒಂದು ಪಿಲ್ಲರ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ಕೆಲಸವನ್ನು ಆರಂಭ ಮಾಡಲಾಗಿತ್ತು. ಕಾರ್ಯ ಪೂರ್ಣಗೊಂಡಿದ್ದು, ಈ ಫ್ಲೈಓವರ್ ನಲ್ಲಿ ಬರುವ ಎಲ್ಲಾ ಪಿಲ್ಲರ್ ಗಳಲ್ಲಿ ಮುಂದೆ ಯಾವುದೇ ಸಮಸ್ಯೆ ಎದುರಾಗದಂತೆ ಇಂದು ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ ತಂಡ ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ಎಲ್ಲಾ ಕೆಲಸ ಪೂರ್ಣಗೊಂಡಿದ್ದು, ಸುಗಮ ಸಂಚಾರಕ್ಕೆ ಇನ್ನೂ ಒಂದು ವಾರ ಕಾಲಾವಧಿ ಕಾಯಲೇಬೇಕಿದೆ.
ಫ್ಲೈ ಓವರ್ ಕೆಲಸ ಸಂಪೂಣವಾಗಿ ಮುಗಿದಿದ್ದು, ದೆಹಲಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ತಂಡ ಬಂದು ಪರಿಶೀಲನೆ ನಡೆಸಿದ ನಂತರ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ. ಇನ್ನೂ ಈ ರಸ್ತೆಯನ್ನು ಟೋಲ್ ಕಂಪನಿಯ ನಿರ್ವಹಣೆ ಹಾಗೂ ಬಿಬಿಎಂಪಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಬೆಂಗಳೂರು ಟ್ರಾಫಿಕ್ ಪೊಲೀಸರಿಗೂ ಮಾಹಿತಿಯನ್ನು ರವಾನೆ ಮಾಡಲಾಗಿದೆ. ಇದನ್ನೂ ಓದಿ: ಕ್ಯೂನಲ್ಲಿ ನಿಂತೆ 16 ಸಾವಿರ ರೂಪಾಯಿ ಸಂಪಾದಿಸುತ್ತಾನೆ
ನೆಲಮಂಗಲ ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯ ಫ್ಲೈ ಓವರ್ ರಸ್ತೆಯಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಇಪ್ಪತ್ತು ದಿನದ ಹಿಂದೆ ಗೊರಗುಂಟೆಪಾಳ್ಯ, ನಾಗಸಂದ್ರ ನಡುವಿನ ಎರಡು ಬದಿಯ ಫ್ಲೈ ಓವರ್ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಇದನ್ನೂ ಓದಿ: ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ – 17ರ ಹುಡುಗ ಅರೆಸ್ಟ್