Bengaluru City
ಮತ್ತೆ ರಾಜ್ಯದಲ್ಲಿ ನೈಟ್ ಕರ್ಫ್ಯೂ?

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧವಾತ್ತಿರುವವರಿಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ.
ಹೌದು. ಹೊಸ ವರ್ಷದ ಸಾರ್ವಜನಿಕ ಸಂಭ್ರಮಕ್ಕೆ ಬ್ರೇಕ್ ಬೀಳುವ ಸಾಧ್ಯತೆಗಳಿವೆ. ಹೊಸ ವರ್ಷಕ್ಕೆ ಒಂದು ವಾರ ಮೊದಲೇ ನೈಟ್ ಕರ್ಫ್ಯೂಗೆ ಪ್ಲಾನ್ ಮಾಡಲಾಗುತ್ತಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಡಿಸೆಂಬರ್ 26ರಿಂದ ನೈಟ್ ಕರ್ಫ್ಯೂ ಜಾರಿಗೆ ತರಲು ಚಿಂತನೆ ನಡೆದಿದೆ. ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಮತ್ತೆ ರಾತ್ರಿ ಕರ್ಫ್ಯೂ ಜಾರಿ ಆಗಬಹುದು. ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಕರ್ಫ್ಯೂ ಜಾರಿಯಾಗುವ ಸಾಧ್ಯತೆ ಇದೆ.
ಹೊಸ ವರ್ಷದ ಸಂಭ್ರಮಕ್ಕೆ ಎಂಜಿ ರೋಡ್, ಬ್ರಿಗೇಡ್ ರೋಡ್ಗಳಲ್ಲಿ ಹಾಗೂ ಹೋಟೆಲ್, ರೆಸಾರ್ಟ್, ಪಬ್ಗಳಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್ ಹಾಕಲಾಗುತ್ತಿದೆ. ಕೊರೊನಾ ಸೆಕೆಂಡ್ ವೇವ್ ಆತಂಕ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
