Karnataka

ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಯುವರಾಜ್ ಸ್ವಾಮಿ ಜೈಲಿನಿಂದ ಬಿಡುಗಡೆ

Published

on

Share this

ಬೆಂಗಳೂರು: ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ಬಲೆಗೆ ಬಿದ್ದು ಬಂಧನಕ್ಕೊಳಗಾಗಿದ್ದ ಯುವರಾಜ್ ಸ್ವಾಮಿ ಜೈಲಿನಿಂದ ಇಂದು ಬಿಡುಗಡೆಗೊಂಡಿದ್ದಾರೆ.

ವಂಚನೆ ಆರೋಪಕ್ಕೆ ಸಿಲುಕಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿ ಬಳಿಕ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದರು. ಅನಾರೋಗ್ಯದ ಕಾರಣ ಕೊಟ್ಟು ಬಿಡುಗಡೆಗೊಳಿಸಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ಮಾಡಿರುವ ಕೋರ್ಟ್ ಅನಾರೋಗ್ಯ ಕಾರಣದಿಂದಾಗಿ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಹಲವು ಬಾರಿ ಜಾಮೀನು ಕೋರಿ ಅರ್ಜಿಸಲ್ಲಿಸಿದ್ದರು. ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನೂ ಓದಿ: ರಾಧಿಕಾಗೆ ಯುವರಾಜ್ ಸ್ವಾಮಿ ಕಂಟಕ – ರಾಜಕಾರಣಿ ಬಗ್ಗೆ ನಡೆದಿದೆ ಸಂಭಾಷಣೆ

ಯುವರಾಜ್ ಸ್ವಾಮಿ ಮೇಲಿನ ಆರೋಪವೇನು?
ಸಿಸಿಬಿ ಪೊಲೀಸರು ಯುವರಾಜ್ ಮನೆಯ ಮೇಲೆ ದಾಳಿ ಮಾಡಿದ್ದ ವೇಳೆ ಬರೋಬ್ಬರಿ 89ಕ್ಕೂ ಹೆಚ್ಚು ದಾಖಲೆಗಳನ್ನು ಸೀಜ್ ಮಾಡಿದ್ದರು. ಯುವರಾಜ್ ನ ಪರ್ಸನಲ್ ಹಾಗೂ ಬ್ಯಾಂಕ್, ಆಸ್ತಿ ದಾಖಲೆಗಳು ಪತ್ತೆಯಾಗಿದ್ದವು. ಅಲ್ಲದೆ ಇದೇ ಸಂದರ್ಭದಲ್ಲಿ ಅನೇಕ ಗಣ್ಯರಿಗೆ ಸಂಬಂಧಿಸಿದ ದಾಖಲೆಗಳನ್ನು ಸಹ ಸೀಜ್ ಮಾಡಲಾಗಿತ್ತು. ಈ ಬಗ್ಗೆ ಎಲ್ಲ ಪಿನ್ ಟು ಪಿನ್ ದಾಖಲೆಗಳನ್ನು ಪೊಲೀಸರು ಚಾರ್ಜ್ ಶೀಟ್‍ನಲ್ಲಿ ಉಲ್ಲೇಖಿಸಿದ್ದರು.

ಪ್ರಮುಖ ದಾಖಲೆಗಳು
ಚಾರ್ಜ್ ಶೀಟ್ ನಲ್ಲಿ ಹೇಳಿರುವ ಕೆಲವು ಪ್ರಮುಖ ದಾಖಲೆಗಳ ಲಭ್ಯವಾಗಿದ್ದು, ಇದರಲ್ಲಿ ಸಚಿವ ಮುರಗೇಶ್ ನಿರಾಣಿ ಲೇಟರ್ ಹೆಡ್ ಮತ್ತು ಬಯೋಡೆಟಾ, ಪ್ರಮೋದ್ ಮಧ್ವರಾಜ್ ಲೇಟರ್ ಹೆಡ್, ಬಯೋಡೆಟಾ, ಉಮೇಶ್ ಕತ್ತಿಯವರ ಲೇಟರ್ ಹೆಡ್, ಬಯೋಡೆಟಾ ಹಾಗೂ ಸಚಿವ ಶ್ರೀರಾಮುಲು ಅವರಿಗೆ ಸೇರಿದ ಕೆಲ ದಾಖಲೆಗಳನ್ನು ಸಹ ಸೀಜ್ ಮಾಡಲಾಗಿದೆ. ಮುತ್ತಪ್ಪ ರೈಗೆ ಸೆಕ್ಯೂರಿಟಿ ಕೋರಿ ಶ್ರೀರಾಮುಲು ಹೆಸರಲ್ಲಿ ಪತ್ರ ಬರೆದಿರುವುದು ಸಹ ಸಿಕ್ಕಿದೆ. ಶ್ರೀರಾಮುಲು ಅವರ ಲೇಟರ್ ಹೆಡ್ ನಲ್ಲಿ ಗೃಹ ಇಲಾಖೆಗೆ ಪತ್ರ ಬರೆಯಲಾಗಿದೆ. ಇದನ್ನೂ ಓದಿ: ನಟಿ ರಾಧಿಕಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಯುವರಾಜ್ ಜೊತೆಗೆ ಸ್ವೀಟಿಗೂ ಕಂಟಕ ಫಿಕ್ಸಾ

ಬಿಜೆಪಿ ಪಕ್ಷದ ಹೆಸರಿನ ಅನೇಕ ಲೇಟರ್ ಹೆಡ್ ಸಮೇತ ಪತ್ರಗಳು, ಉಪಚುನಾವಣೆಗೆ ವಸಂತ್ ಬೆಳವಾಯಿ ಟಿಕೆಟ್ ಕೋರಿಕೆ ಪತ್ರ. ಟಿ.ಶ್ಯಾಮ್ ಭಟ್ ವಯಕ್ತಿಕ ಸೇವಾ ವಿವರ ಇರುವ ದಾಖಲೆಗಳು, ನಿವೃತ್ತ ಜಡ್ಜ್ ಇಂದ್ರಕಲಾ ಅವರ ಪರ್ಸನಲ್ ಪ್ರೊಫೈಲ್ ಗಳು ಲಭ್ಯವಾಗಿತ್ತು. 9 ಮಂದಿ ಸಾಕ್ಷಿಗಳ ಸಮೇತ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, ಯುವರಾಜ್ ಸ್ವಾಮಿ ವಿರುದ್ಧ ಐಪಿಸಿ ಸೆಕ್ಷನ್ 420, 504, 506 ಅಡಿ ಚಾರ್ಜ್ ಸಲ್ಲಿಸಲಾಗಿದೆ. ಮಾಡಿದ ಕೃತ್ಯವನ್ನು ಯುವರಾಜ್ ಸ್ವಾಮಿ ಪೊಲೀಸರ ಮುಂದೆ ಒಪ್ಪಿಕೊಂಡು ಜೈಲು ಶಿಕ್ಷೆ ಅನುಭವಿಸುತ್ತಿದ್ದರು.

Click to comment

Leave a Reply

Your email address will not be published. Required fields are marked *

Advertisement
Advertisement