ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ಜ್ವಾಲೆ ಕರ್ನಾಟಕದಲ್ಲಿ ಹೆಚ್ಚಾಗಿದೆ. ಕಳೆದ 10 ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಯ ಕಾವು ತೀವ್ರ ಸ್ವರೂಪ ಪಡೆದಿದೆ.
ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಹಿಂಸಾತ್ಮಕ ಕೃತ್ಯಗಳು ನಡೆಯಬಾರದು, ನಗರದಲ್ಲಿ ಕಂಡ ಕಂಡಲ್ಲಿ ಟೈಯರ್ ಗೆ ಬೆಂಕಿ ಹಚ್ಚುವ ಕೃತ್ಯಗಳು ಜರುಗಬಾರದು ಎಂದು ಮುಂಜಾಗ್ರತಾ ಕ್ರಮವಾಗಿ ಪೆಟ್ರೋಲ್ ಬಂಕ್ ಗಳಲ್ಲಿ ಬಾಟಲಿಗಳಿಗೆ, ಕ್ಯಾನ್ ಗಳಿಗೆ ಪೆಟ್ರೋಲ್ ಹಾಕದಂತೆ ಬಂಕ್ ಮಾಲೀಕರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಂಕ್ ಗಳಿಗೆ ಆ ವ್ಯಾಪ್ತಿಯ ಪೊಲೀಸರಿಂದ ನೋಟಿಸ್ ನೀಡಲಾಗಿದೆ.
ನೋಟಿಸ್‍ಗೆ ಬೆಲೆ ನೀಡದೇ ಬಾಟಲಿ, ಕ್ಯಾನ್ ಗಳಲ್ಲಿ ಪೆಟ್ರೋಲ್, ಡಿಸೇಲ್ ಹಾಕಿದ್ರೆ ಕಠಿಣ ಕಾನೂನು ಕ್ರಮ ಕೈಗೊಳ್ಳೋದಾಗಿ ಪೊಲೀಸರು ಬಂಕ್ ಮಾಲೀಕರಿಗೆ ಎಚ್ಚರಿಸಿದ್ದಾರೆ. ಆದರೂ ಕೆಲವು ಬಂಕ್‍ಗಳಲ್ಲಿ ನೋಟಿಸ್ ಗೆ ಕಿಮ್ಮತ್ತು ಕೊಡದೇ ಪೆಟ್ರೋಲ್, ಡೀಸೆಲ್ ನ್ನು ಕ್ಯಾನ್, ಬಾಟಲಿಗೆ ಹಾಕಲಾಗುತ್ತಿದೆ.