ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ ಏಳು ರೂ. ಗಳಷ್ಟು ಕಡಿಮೆ ಮಾಡಿದೆ. ಟ್ವೀಟ್ ಮೂಲಕ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಳೆ ಸಂಜೆಯಿಂದ ಈ ದರ ಜಾರಿಯಾಗಲಿದೆ ಎಂದು ಹೇಳಿದ್ದಾರೆ.
ಶ್ರೀ @narendramodi ಅವರ ನೇತೃತ್ವದ ಕೇಂದ್ರ ಸರಕಾರ ಡೀಸಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು ಸ್ವಾಗತಾರ್ಹ ಜನರಿಗೆ ದೀಪಾವಳಿಯ ಉಡಗೊರೆ ಕೊಟ್ಟಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು,
1/3
— Basavaraj S Bommai (@BSBommai) November 3, 2021
Advertisement
ಕೇಂದ್ರ ಸರ್ಕಾರವು ಡೀಸಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 05 ರೂ. ಕಡಿಮೆಗೊಳಿಸಿದ್ದು ಸ್ವಾಗತಾರ್ಹ ಎಂದ ಅವರು ಜನರಿಗೆ ದೀಪಾವಳಿಯ ಉಡಗೊರೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಈ ನಮ್ಮ ನಿರ್ದಾರದಿಂದ ರಾಜ್ಯ ಸರ್ಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ.
Advertisement
ಕರ್ನಾಟಕ ರಾಜ್ಯ ಸರಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ.
ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ.
2/3
— Basavaraj S Bommai (@BSBommai) November 3, 2021
Advertisement
ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ. ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದೀಪಾವಳಿಗೆ ಮೋದಿ ಸರ್ಕಾರದಿಂದ ಬಂಪರ್ – ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ
Advertisement
ರಾಜ್ಯ ಸರಕಾರದ ಈ ನಿರ್ದಾರ ನಾಳೆ ಸಾಯಂಕಾಲದಿಂದ ಅನ್ವಯವಾಗುವುದು.
ಇದು ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ.
ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು.
3/3@CMofKarnataka
— Basavaraj S Bommai (@BSBommai) November 3, 2021