ಬೆಂಗಳೂರು: ರಾಜ್ಯದಲ್ಲಿ ಕೇಳಿಬರುತ್ತಿರುವ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಕೆ.ಎಸ್.ಆರ್.ಪಿ ಎಡಿಜಿಪಿ ಅಲೋಕ್ ಕುಮಾರ್ ಕೈವಾಡವಿದೆ. ಅವರನ್ನು ಅಮಾನತು ಮಾಡುವಂತೆ ಕೆಲ ಬಿಜೆಪಿ ಶಾಸಕರು ಸಿಎಂ ಯಡಿಯೂರಪ್ಪನವರಿಗೆ ದೂರು ನೀಡಿದ್ದಾರೆ.
ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಅಲೋಕ್ ಕುಮಾರ್ ಅಮಾನತಿಗೆ ಒತ್ತಡಗಳು ಹೆಚ್ಚಾಗುತ್ತಿದ್ದು, ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಅಲೋಕ್ ಕುಮಾರ್ ಅವರ ನೇರ ಕೈವಾಡವಿದೆ. ಸಿಬಿಐ ತನಿಖೆ ಆರಂಭಕ್ಕೂ ಮುನ್ನವೇ ಅಮಾನತು ಮಾಡಿ ಎಂದು ಕೆಲ ಬಿಜೆಪಿ ಶಾಸಕರು ಸಿಎಂ ಯಡಿಯೂರಪ್ಪನವರ ಬಳಿ ದೂರು ನೀಡಿದ್ದಾರೆ ಎನ್ನಲಾಗಿದೆ.
Advertisement
Advertisement
ಸರ್ಕಾರ ರಚನೆ ಸಂದರ್ಭ ಅಲೋಕ್ ಪಕ್ಷಪಾತಿಯಂತೆ ನಡೆದುಕೊಂಡಿದ್ದಾರೆ. ಹುದ್ದೆಯಲ್ಲಿ ಮುಂದುವರಿದರೆ ತನಿಖೆಯ ಮೇಲೆ ಪ್ರಭಾವ ಬೀರಬಹುದು. ಹೀಗಾಗಿ ಅಮಾನತು ಮಾಡಿ ಎಂದು ಬಿಜೆಪಿಯ ಕೆಲ ಶಾಸಕರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಈ ಹಿಂದೆ ಒಂದಂಕಿ ಲಾಟರಿ ಪ್ರಕರಣದಲ್ಲಿ ಅಲೋಕ್ರನ್ನು ಹೆಚ್ಚುವರಿ ಪೊಲೀಸ್ ಆಯುಕ್ತ ಹುದ್ದೆಯಿಂದ ಅಮಾನತು ಮಾಡಲಾಗಿತ್ತು. ಇದೇ ಕಷ್ಟ ಮತ್ತೊಮ್ಮೆ ಅಲೋಕ್ಗೆ ಎದುರಾಗುತ್ತಾ ಅನ್ನೋ ಮಾತುಗಳು ಕೇಳಿಬರುತ್ತಿವೆ.