Wednesday, 19th February 2020

Recent News

ಫೋನ್ ಕದ್ದಾಲಿಕೆ ಎಫೆಕ್ಟ್- ಕೈ ದಿಗ್ಗಜರ ನಡುವೆ ಸಂಘರ್ಷ

ಬೆಂಗಳೂರು: ಫೋನ್ ಕದ್ದಾಲಿಕೆ ಎಫೆಕ್ಟ್ ಇದೀಗ ಕಾಂಗ್ರೆಸ್ ಪಕ್ಷದ ಮೇಲಾಗಿದೆ. ಪ್ರಕರಣವನ್ನು ಸಿಬಿಐಗೆ ವಹಿಸಿದ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ದಿಗ್ಗಜರ ಮಧ್ಯೆ ಸಂಘರ್ಷ ಏರ್ಪಟ್ಟಿದೆ.

ಫೋನ್ ಟ್ಯಾಪಿಂಗ್ ಕೇಸ್ ಸಿಬಿಐಗೆ ಕೊಡಲು ಸಿದ್ದರಾಮಯ್ಯ ಅಂಡ್ ಟೀಂ ಕಾರಣ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ದೂರು ನೀಡಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಫೋನ್ ಕದ್ದಾಲಿಕೆ ಪ್ರಕರಣವನ್ನು ತನಿಖೆಗೆ ಕೊಡಿ ಎಂದು ಮೊದಲು ಸಿದ್ದರಾಮಯ್ಯ ಹಾಗೂ ಅವರ ತಂಡ ಆಗ್ರಹಿಸಿದೆ. ಈ ಪ್ರಕರಣವನ್ನು ತನಿಖೆಗೆ ಕೊಡುವಂತೆ ಬಿಜೆಪಿ ನಾಯಕರು ಒತ್ತಾಯಿಸಿದ್ದರು. ಬಿಜೆಪಿ ಅವರ ಮಾತಿಗೆ ಸಿದ್ದರಾಮಯ್ಯ ಆ್ಯಂಡ್ ಟೀಂ ದನಿಗೂಡಿಸಿದೆ. ಬಿಜೆಪಿ ಮೂಲಕ ಪ್ರಕರಣವನ್ನು ಸಿಬಿಐಗೆ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಹೀಗಾಗಿ ಸದ್ಯದ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ಮತ್ತು ಅವರ ತಂಡದ ಪಾಲೂ ಇದೆ. ದಯವಿಟ್ಟು ಮಧ್ಯ ಪ್ರವೇಶ ಮಾಡಿ ಎಂದು ಡಿಕೆಶಿ ಎಐಸಿಸಿಗೆ ಕಂಪ್ಲೆಂಟ್ ಮಾಡಿದ್ದಾರೆ ಎನ್ನಲಾಗಿದೆ.

ಅಲ್ಲದೆ ಆಪರೇಷನ್ ಕಮಲ ಸಮಯದಲ್ಲಿ ರಹಸ್ಯವಾಗಿ ನಾನು ದೆಹಲಿಗೆ ಬಂದಿದ್ದೇನೆ. ಇವರೆಲ್ಲರೂ ಅದನ್ನೇ ತಪ್ಪಾಗಿ ತಿಳಿದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವಿರೋಧಿ ಬಣದಿಂದ ಹೈಕಮಾಂಡ್ ಗೆ ದೂರು ನೀಡಲಾಗಿದೆ.

Leave a Reply

Your email address will not be published. Required fields are marked *