ದರ್ಶನ್‌ ಜಾಮೀನು ರದ್ದುಗೊಳಿಸಿ – ಸುಪ್ರೀಂಗೆ 1492 ಪುಟಗಳ ದಾಖಲೆ ಸಲ್ಲಿಸಿದ ಪೊಲೀಸರು

Public TV
1 Min Read
Darshan 1 2

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ ದರ್ಶನ್‌ಗೆ (Darshan) ಸಂಕಷ್ಟ ತಪ್ಪಿದಂತೆ ಕಾಣ್ತಿಲ್ಲ. ದರ್ಶನ್ ಹಾಗೂ 7 ಆರೋಪಿಗಳ ಜಾಮೀನು ರದ್ದುಕೋರಿ ಸುಪ್ರೀಂಕೋರ್ಟ್‌ಗೆ (Supreme Court) ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ.

ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿದೆ. ಇದನ್ನೂ ಓದಿ: ಮದುವೆಯಾಗಿ 2 ವರ್ಷಕ್ಕೆ ಡಿವೋರ್ಸ್ ಘೋಷಿಸಿದ ನಟಿ ಅಪರ್ಣಾ ವಿನೋದ್

supreme Court 1

ಕಡತದಲ್ಲಿ ಏನಿದೆ?
ಹೈಕೋರ್ಟ್ ಜಾಮೀನು ಆದೇಶ, ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಮತ್ತು ದೂರಿನ ಪ್ರತಿ, ಮರಣೋತ್ತರ ಪರೀಕ್ಷೆಯ ವರದಿ, ಆರೋಪಿಗಳ ಗ್ರೌಂಡ್ಸ್ ಆಫ್ ಅರೆಸ್ಟ್, ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿಯ ತರ್ಜುಮೆ ಪ್ರತಿ.

ಪ್ರತ್ಯಕ್ಷ ದರ್ಶಿಗಳ ಹೇಳಿಕೆಯ ತರ್ಜುಮೆ ಕಾಪಿ, ಮರಣೋತ್ತರ ಪರೀಕ್ಷೆಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಸಿಡಿಆರ್, ಪಂಚನಾಮೆ ವರದಿ, ಆರೋಪಿಗಳ ಬಳಿ ವಶಪಡಿಸಿಕೊಂಡ ಡಿಜಿಟಲ್ ವಸ್ತುಗಳ ವಿಶ್ಲೇಷಣೆ ವರದಿ.

ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾ ಆದೇಶ ಪ್ರತಿ, ದರ್ಶನ್‌ಗೆ ನೀಡಿದ್ದ ಮಧ್ಯಂತರ ಜಾಮೀನು ಅದೇಶ ಪ್ರತಿ, ಜೈಲಿನಿಂದ ದರ್ಶನ್ ಬಗ್ಗೆ ಸಲ್ಲಿಕೆಯಾದ ವೈದ್ಯಕೀಯ ವರದಿ, ಬಿಜಿಎಸ್ ಆಸ್ಪತ್ರೆ ವೈದ್ಯರ ವರದಿ ಸೇರಿದಂತೆ ಒಟ್ಟು 15 ಅಂಶಗಳಿಗೆ ಸಂಬಂಧಿಸಿ  ಒಟ್ಟು 1492 ಪುಟಗಳ ಕಡತವನ್ನು  ಕೋರ್ಟ್‌ಗೆ ನೀಡಿದೆ.

 

Share This Article