Bengaluru CityCrimeKarnatakaLatestMain PostNational

ಸಿನಿಮಾ ಸ್ಟೈಲ್‍ನಲ್ಲಿ ಚೇಸಿಂಗ್ – ರಾಜಸ್ಥಾನಕ್ಕೆ ತೆರಳಿ ದರೋಡೆಕೋರರ ಹೆಡೆಮುರಿಕಟ್ಟಿದ ಬೆಂಗ್ಳೂರು ಪೊಲೀಸರು

Advertisements

ಜೈಪುರ: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರಾಬರಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ರಾಜಸ್ಥಾನದಲ್ಲಿ ಸಿನಿಮಾ ಸ್ಟೈಲ್‍ನಲ್ಲಿ ಚೇಸಿಂಗ್ ಮಾಡಿ ಹಿಡಿಯುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುಲೈ 4 ರಂದು ಜುವೆಲ್ಲರಿ ಶಾಪ್ ಮಾಲೀಕರೊಬ್ಬರನ್ನು ಗನ್ ತೋರಿಸಿ ಕೈ ಕಾಲು ಕಟ್ಟಿ ಹಾಕಿ ಚಿನ್ನ, ಬೆಳ್ಳಿ ಮತ್ತು ನಗದು ದೋಚಿ ಕಿಲಾಡಿಗಳ ತಂಡವೊಂದು ಎಸ್ಕೇಪ್ ಆಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಬೆಂಗಳೂರು ಪೊಲೀಸರು ಆರೋಪಿಗಳು ಎಸ್ಕೇಪ್ ಆಗಿದ್ದ ಕಾರಿನ ಜಾಡು ಹಿಡಿದಾಗ ರಾಜಸ್ಥಾನಕ್ಕೆ ತೆರಳಿರುವ ಮಾಹಿತಿ ಸಿಕ್ಕಿದೆ. ಕೂಡಲೇ ಕಾರ್ಯ ಪ್ರವೃತ್ತರಾದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರ ತಂಡವೊಂದು ರಾಜಸ್ಥಾನಕ್ಕೆ ತೆರಳಿ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆಗೆ ಇಳಿದಿತ್ತು. ಇದನ್ನೂ ಓದಿ: `ಪವಿತ್ರ’ಪ್ರೇಮ ವಿಫಲ – ಯುವಕ ಕೈಕೊಟ್ಟನೆಂದು ಕಾಲೇಜಿನಲ್ಲೇ ವಿದ್ಯಾರ್ಥಿನಿ ನೇಣಿಗೆ ಶರಣು

ರಾಜಸ್ಥಾನಕ್ಕೆ ತೆರಳಿದ ಬಳಿಕ ಅಲ್ಲಿನ ಪೊಲೀಸರಿಗೆ ಈ ಬಗ್ಗೆ ಬೆಂಗಳೂರು ಪೊಲೀಸರು ಮಾಹಿತಿ ಹಂಚಿಕೊಂಡಾಗ ಇದೇ ಗ್ಯಾಂಗ್ ರಾಜಸ್ಥಾನದ ಉದಯಪುರದ ಪೊಲೀಸರಿಗೂ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆಗಿತ್ತು ಎಂಬ ಅಂಶ ಬಯಲಿಗೆ ಬಂದಿದೆ. ಬಳಿಕ ಈ ಗ್ಯಾಂಗ್‍ನ್ನು ಮಟ್ಟಹಾಕಲು ರಾಜಸ್ಥಾನ ಮತ್ತು ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ವೇಳೆ ಉದಯಪುರದಲ್ಲಿ ಈ ಗ್ಯಾಂಗ್ ಇರುವ ಮಾಹಿತಿ ಲಭ್ಯವಾಗಿ ಕಾರ್ಯಚರಣೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಚಂದ್ರಶೇಖರ್‌ ಗುರೂಜಿ ಹತ್ಯೆ – ಹೋಟೆಲ್‌ನಲ್ಲಿ ಸುದರ್ಶನ ಹೋಮ

ಪೊಲೀಸರು ಕಾರ್ಯಚರಣೆಗೆ ಮುಂದಾಗುತ್ತಿದ್ದಂತೆ ಆರೋಪಿಗಳು ಎಲೆಕ್ಟ್ರಾನಿಕ್ ಸಿಟಿ ಪೊಲೀಸರ ಮೇಲೆ ಗುಂಡು ಹಾರಿಸಿ ಕಾರಿನೊಂದಿಗೆ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಕೂಡ ಆರೋಪಿಗಳ ಕಾರ್ ಚೇಸಿಂಗ್ ಮಾಡಲು ಆರಂಭಿಸಿದ್ದಾರೆ. ಚೇಸಿಂಗ್ ಮಾಡುತ್ತಿದ್ದಂತೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಆರೋಪಿಗಳು ಯತ್ನಿಸಿದ್ದಾರೆ. ಈ ವೇಳೆ ಬೆನ್ನಟ್ಟಿ ಪೊಲೀಸರು ಆರೋಪಿಗಳ ಕಾರಿಗೆ ಗುದ್ದಿ ರಸ್ತೆಗೆ ಉರುಳಿಸಿದ್ದಾರೆ. ಬಿದ್ದೊಡನೆ ಆರೋಪಿಗಳು ಎದ್ದು ಓಡಲು ಆರಂಭಿಸಿದ್ದಾರೆ ಆದರೂ ಬಿಡದ ಪೊಲೀಸರು ಆರೋಪಿಗಳ ಹಿಂದೆ ಓಡಿ ಹಿಡಿದು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ದೇವಾರಾಮ್, ರಾಹುಲ್ ಸೋಲಂಕಿ, ಅನಿಲ್ ರಾಮ್ ಸಿಂಗ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ವಿಚಾರಿಸಿದಾಗ ಬೆಂಗಳೂರಿನಿಂದ ದರೋಡೆ ಮಾಡಿದ ಕೋಟ್ಯಂತರ ಮೌಲ್ಯದ ಚಿನ್ನ, ಬೆಳ್ಳಿ ಪತ್ತೆಯಾಗಿದೆ. ಒಟ್ಟು 2 ಕೆ.ಜಿ ಚಿನ್ನ, 30 ಕೆ.ಜಿ ಬೆಳ್ಳಿ ಸೇರಿದಂತೆ ಗನ್, ಜೀವಂತ ಗುಂಡನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

Live Tv

Leave a Reply

Your email address will not be published.

Back to top button