ಬೆಂಗಳೂರು: ಹೊಸ ವರ್ಷಕ್ಕೆ ದಿನಗಣನೆ ಆರಂಭ ಆಗುತ್ತಿದ್ದಂತೆ ಪೊಲೀಸರ ಕೆಲಸ ಹೆಚ್ಚಾಗುತ್ತಿದೆ. ಕಳೆದ ವರ್ಷ ನಡೆದ ಘಟನೆ ಇಡೀ ಪೊಲೀಸರೇ ತಲೆ ತಗ್ಗಿಸುವಂತೆ ಮಾಡಿತ್ತು. ಈ ಬಾರಿ ಅಂತಹ ಘಟನೆ ಆಗಬಾರದು ಅಂತ ಪೊಲೀಸರು ಒಂದು ಹೊಸ ಪ್ಲಾನ್‍ಗೆ ಚಿಂತನೆ ನಡೆಸಿದ್ದಾರೆ.
ಕಳೆದ ಬಾರಿ ಹೊಸ ವರ್ಷದ ಆಚರಣೆ ವೇಳೆ ನಡೆದ ಅವಾಂತರಗಳಿಂದ ರಾಜ್ಯ ರಾಜಧಾನಿಯಲ್ಲಿ ಮಹಿಳೆಯರು ಸೇಫಾ ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ಹೀಗಾಗಿ ಈ ಬಾರಿ ಪೊಲೀಸರು ಅಲರ್ಟ್ ಆಗಿದ್ದಾರೆ. ಎಲ್ಲಾ ವಿಭಾಗದ ಡಿಸಿಪಿ ಕಚೇರಿಗಳಿಗೆ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಭೇಟಿ ನೀಡಿ, ಸಿದ್ಧತೆ ಕುರಿತು ಮಾಹಿತಿ ಪಡೆದಿದ್ದಾರೆ. ಇನ್ನೊಂದು ವಿಷಯ ಏನಂದ್ರೆ ಈ ಬಾರಿ ಬ್ರಿಗೇಡ್ ಹಾಗೂ ಎಂ.ಜಿ ರಸ್ತೆಯಲ್ಲಿ ನ್ಯೂ ಇಯರ್ ಸೆಲೆಬ್ರೇಷನ್‍ಗೆ ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ವ್ಯವಸ್ಥೆಗೆ ಚಿಂತನೆ ನಡೆದಿದೆ. ಶೇಕಡಾ 30ರಷ್ಟು ಜಾಗದಲ್ಲಿ ಮಹಿಳೆಯರಿಗೆ ಹಾಗೂ ಶೇಕಡಾ 70ರಷ್ಟು ಜಾಗದಲ್ಲಿ ಪುರುಷರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲು ಚಿಂತಿಸಲಾಗುತ್ತಿದೆ.
Advertisement
Advertisement
ಈ ಬಾರಿ ಯಾವುದೇ ಲೈಂಗಿಕ ದೌರ್ಜನ್ಯ ಪ್ರಕರಣಗಳು ಆಗದ ಹಾಗೆ ಸೂಕ್ತ ಬಂದೋಬಸ್ತ್ ಮಾಡುವಂತೆ ಗೃಹಸಚಿವ ರಾಮಲಿಂಗರೆಡ್ಡಿ ನಗರ ಪೊಲೀಸರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ನಗರದ ಹಿರಿಯ ಪೊಲೀಸರು ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿನ ಎಲ್ಲಾ ಅಂಗಡಿ ಮಾಲೀಕರ ಜೊತೆ ಸಭೆ ನಡೆಸಿ, ಅಂಗಡಿಯ ಮುಂಭಾಗವೂ ಸಿಸಿ ಕ್ಯಾಮೆರಾವನ್ನು ಅಳವಡಿಸುವಂತೆ ಸೂಚಿಸಿದ್ದಾರೆ. ಜೊತೆಗೆ ಡ್ರೋನ್ ಕ್ಯಾಮೆರಾ ಹಾಗೂ ವಾಚಿಂಗ್ ಟವರ್‍ಗಳು ಕೂಡ ಕಾರ್ಯ ನಿರ್ವಹಿಸಲಿವೆ.
Advertisement
ಈ ಬಾರಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳುವುದು ಪೊಲೀಸರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಆದ್ರೆ ಈ ಹೊಸ ಪ್ಲಾನ್ ಎಷ್ಟರ ಮಟ್ಟಿಗೆ ಸಕ್ಸಸ್ ಆಗುತ್ತೆ ಅನ್ನೋದನ್ನು ಕಾದು ನೋಡ್ಬೇಕಿದೆ.