– ಗಾಡಿ ಪಾರ್ಕ್ ಮಾಡಿ, ಮನೆಗೆ ಹೋಗಿ
ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಇಂದು ಬೆಳ್ಳಂಬೆಳಗ್ಗೆ ವಾಕಿಂಗ್ ಡ್ರೆಸ್‍ನಲ್ಲೇ ರಸ್ತೆಗಿಳಿದಿದ್ದಾರೆ. ತಾವೇ ಖುದ್ದು ವಾಹನ ತಪಾಸಣೆ ನಡೆಸಿ, ಮುಲಾಜಿಲ್ಲದೆ ವಾಹನಗಳನ್ನು ಸೀಜ್ ಮಾಡಿದ್ದಾರೆ.
Advertisement
ನಗರದ ಟೌನ್ ಹಾಲ್ ಬಳಿ ಭಾಸ್ಕರ್ ರಾವ್ ಚೆಕಿಂಗ್ ಮಾಡಿದ್ದು, ಎಲ್ಲಿಂದ ಬರ್ತಾ ಇರೋದು, ಗಾಡಿ ಸೈಡ್‍ಗೆ ಹಾಕು, ಪಾಸ್ ಇದ್ಯಾ, ಗಾಡಿ ನಿಲ್ಲಿಸು. ದೂರ ನಿಲ್ಲಪ್ಪ ನೀನು ಎಂದು ಹೇಳುತ್ತಲೇ ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ಸೀಜ್ ಮಾಡಿದ್ದಾರೆ. ಹೀಗೆ ಸುಖಾಸುಮ್ಮನೆ ಓಡಾಡುತ್ತಿದ್ದ ಇನ್ನೋವಾ ಕಾರನ್ನು ಮುಲಾಜಿಲ್ಲದೆ ಸೀಜ್ ಮಾಡಿದ್ದಾರೆ.
Advertisement
ಕಮೀಷನರ್ ಎದುರೇ ಪಾಸ್ ಇಲ್ಲದೆ ವಾಹನಗಳ ಓಡಾಟ ಹೆಚ್ಚಾಗಿದ್ದು, ಹಲವು ಬೈಕ್, ಕಾರುಗಳನ್ನು ಜಪ್ತಿ ಮಾಡಿಸಿದ್ದಾರೆ. ಕೆಎಸ್‍ಆರ್‍ಟಿಸಿ ಸಿಬ್ಬಂದಿ, ಆರ್ಮಿ ಪ್ಲೇಟ್ ಹಾಕಿದ್ದ ವಾಹನಗಳು ಸೇರಿ ಹಲವು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
Advertisement
Advertisement
ಬೈಕ್ ನಲ್ಲಿ ದೇವಸ್ಥಾನಕ್ಕೆ ಹೊರಟವರು, ಅಂತ್ಯಕ್ರಿಯೆಗೆ ಹೊರಟವರು, ತರಕಾರಿಗೆ ಹೊರಟವರು, ನೆಂಟರ ಮನೆಗೆ ಹೊರಟವರು ಕಮೀಷನರ್‍ಗೆ ಸಿಕ್ಕಿ ಬಿದ್ದಿದ್ದಾರೆ. ಇದನ್ನು ಗಮನಿಸಿದ ಕಮಿಷನರ್ ಸಾರ್ವಜನಿಕರ ಓಡಾಟ ಹೆಚ್ಚಾಗಿದೆ. ವಾಹನ ತಪಾಸಣೆ ಸರಿಯಾಗಿ ಅಗ್ತಿಲ್ಲ. ಮತ್ತಷ್ಟು ಬಿಗಿಗೊಳಿಸಿ ಚೆಕಿಂಗ್ ಮಾಡಬೇಕು ಎಂದು ಕಂಟ್ರೋಲ್ ರೂಂ ಮೂಲಕ ಮತ್ತೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಕಿ ಟಾಕಿ ಮೂಲಕ ವಾಹನಗಳನ್ನು ಸರಿಯಾಗಿ ತಪಾಸಣೆ ಮಾಡಿ. ಬಹುತೇಕ ಮಂದಿ ಬೇಕಾಬಿಟ್ಟಿಯಾಗಿ ಸಂಚರಿಸುತ್ತಿದ್ದಾರೆ. ಆದರೂ ತಪಾಸಣೆ ಸರಿಯಾಗಿ ಅಗ್ತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.