ದಯಾನಂದ್‌ ಅಮಾನತು – ಸರ್ಕಾರದ ನಡೆ ಖಂಡಿಸಿ ಅಂಬೇಡ್ಕರ್‌ ಫೋಟೋ ಹಿಡಿದು ಹೆಡ್ ಕಾನ್‌ಸ್ಟೇಬಲ್‌ ಪ್ರತಿಭಟನೆ

Public TV
1 Min Read
Head Constable Narasimha Raju

ಬೆಂಗಳೂರು: ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌ (B.Dayanand) ಅವರನ್ನು ಅಮಾನತುಗೊಳಿಸಿದ್ದ ಸರ್ಕಾರ ಆದೇಶದ ವಿರುದ್ಧ ಮಡಿವಾಳ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಒಬ್ಬರು ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ.

ಹೆಡ್‌ ಕಾನ್ಸ್‌ಟೇಬಲ್‌ (Head Constable) ನರಸಿಂಹರಾಜು ಅವರು ಸರ್ಕಾರದ ನಡೆ ಖಂಡಿಸಿ ರಾಜ್ಯಪಾಲರಿಗೆ ದೂರು ನೀಡಲು ತೆರಳಿದ್ದರು. ಈ ವೇಳೆ ಅಂಬೇಡ್ಕರ್‌ ಫೋಟೋ ಹಿಡಿದು, ಕಪ್ಪುಪಟ್ಟಿ ಧರಿಸಿ ರಾಜಭವನದ ಎದುರು ಅವರು ಪ್ರತಿಭಟನೆ ನಡೆಸಿದ್ದಾರೆ. ದೂರಿನಲ್ಲಿ ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ರದ್ದು ಪಡಿಸಬೇಕು. ಈ ಮೂಲಕ ಪೊಲೀಸ್‌ ಇಲಾಖೆಗೆ ನೈತಿಕ ಸ್ಥೈರ್ಯ ತುಂಬಬೇಕು ಎಂದು ಬರೆದಿದ್ದಾರೆ. ಅವರನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕಾಲ್ತುಳಿತ ಪ್ರಕರಣ – ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿ 5 ಪೊಲೀಸ್‌ ಅಧಿಕಾರಿಗಳು ಸಸ್ಪೆಂಡ್‌

ಬುಧವಾರ ಆರ್‌ಸಿಬಿ (RCB) ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾಗರೋಪಾದಿಯಲ್ಲಿ ಜನ ನೆರೆದಿದ್ದರು. ಜನರಲ್ಲಿ ನೂಕುನುಗ್ಗಲಿಂದ ಕಾಲ್ತುಳಿತ ಉಂಟಾಗಿ ಈ ದುರಂತ ಸಂಭವಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿದಂತೆ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಗುರುವಾರ ಆದೇಶ ಹೊರಡಿಸಿತ್ತು.

ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌, ಅಡಿಷನಲ್‌ ಕಮಿಷನರ್‌ ವಿಕಾಸ್‌ ಕುಮಾರ್‌, ಸೆಂಟ್ರಲ್‌ ಡಿಸಿಪಿ ಶೇಖರ್‌ ತೆಕ್ಕಣ್ಣನವರ್‌, ಎಸಿಪಿ ಬಾಲಕೃಷ್ಣ, ಇನ್‌ಸ್ಪೆಕ್ಟರ್‌ ಗಿರೀಶ್‌ ಅವರನ್ನು ಅಮಾನತು ಮಾಡಲಾಗಿತ್ತು. ಇದನ್ನೂ ಓದಿ: ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ

Share This Article