ಬೆಂಗಳೂರು: ನವೆಂಬರ್ 10 ರಂದು ಬೆಂಗಳೂರಿನಾದ್ಯಂತ ಬೆಳಗ್ಗೆ 6 ಗಂಟೆಯಿAದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ಅವರು ಆದೇಶ ಹೊರಡಿಸಿದ್ದಾರೆ. ನವೆಂಬರ್ 10 ರಂದು ಮುಸ್ಲಿಂ ರ ಹಬ್ಬ ಈದ್ ಮಿಲಾದ್ ಇರುವ ಕಾರಣ ಅಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆವರೆಗೂ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Advertisement
Advertisement
ಆದೇಶದಲ್ಲಿ ಏನಿದೆ?
ನ.10 ರಂದು ಬೆಂಗಳೂರು ನಗರಾದ್ಯಂತ ಮುಸ್ಲಿಮರು ಈದ್ ಮಿಲಾದ್ ಹಬ್ಬವನ್ನು ಆಚರಿಸುವ ಪ್ರಯುಕ್ತ ಮಸೀದಿಗಳಲ್ಲಿ ಪ್ರಾರ್ಥನೆ ಮುಗಿಸಿ ನಂತರ ಮೆರವಣಿಗಯಲ್ಲಿ ಸ್ಥಬ್ಧ ಚಿತ್ರಗಳು ಧ್ವನಿ ವರ್ಧಕಗಳನ್ನು ಉಪಯೋಗಿಸಿಕೊಂಡು, ಆಯುಧಗಳನ್ನು ಹಾಗೂ ಇನ್ನಿತರೆ ವಸ್ತುಗಳನ್ನು ಪ್ರದರ್ಶಿಸಿ ಕುಣಿಯುತ್ತಾ ರಸ್ತೆಗಳಲ್ಲಿ ವಾಹನಗಳಲ್ಲಿ ನಡಿಗೆಯಲ್ಲಿ ವೈಎಂಸಿಎ ಮೈದಾನ ಹಾಗೂ ನಗರದ ಇತರೆ ಮೈದಾನಗಳಲ್ಲಿ ನಡೆಯುವ ಕಾರ್ಯಕ್ರದಲ್ಲಿ ಭಾಗವಹಿಸಲಿದ್ದಾರೆ.
Advertisement
ಈ ಮೆರವಣಿಗೆಯಲ್ಲಿ ಹೆಚ್ಚಿನ ಜನರು ಭಾಗವಹಿಸಲಿದ್ದು, ಮೆರವಣಿಗೆ ನಡೆಯುವ ಸಮಯದಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕೃತ್ಯಗಳನ್ನೆಸಗಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಹಾಳು ಮಾಡುವ ಸಂಭವಿರುತ್ತದೆ. ಈದ್ ಮಿಲಾದ್ ಮೆರವಣಿಗೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ಉದ್ದೇಶದಿಂದ ಹಾಗೂ ಕಾನೂನು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮದ್ಯಪಾನ ಮಾರಾಟವನ್ನು ನಿಷೇಧಿಸುವುದು ಸೂಕ್ತವೆಂದು ಈ ನಿರ್ಧಾರ ಮಾಡಲಾಗಿದೆ ಎಂದು ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
Advertisement
ಭಾರತೀಯದಂಡ ಪ್ರಕ್ರಿಯ ಸಂಹಿತೆ ಕಲಂ 144 ರ ಉಪ ಕಲಂ (1) ಮತ್ತು (3) ರ ಅನ್ವಯ ದಿನಾಂಕ 10.11.2019 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಬಾರ್‌ಗಳು, ವೈನ್ಸ್ಶಾಪ್‌ಗಳು, ಪಬ್‌ಗಳು ಹಾಗೂ ಎಲ್ಲಾ ರೀತಿಯ ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಬೇಕು ಎಂದು ತಿಳಿಸಲಾಗಿದೆ.