ಬೆಂಗಳೂರು: ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ (The Rameshwaram Cafe) ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ (Bengaluru Police Commissioner) ಸ್ಪಷ್ಟನೆಯೊಂದನ್ನು ನೀಡಿದ್ದಾರೆ. ಪ್ರಕರಣದಲ್ಲಿ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.
ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಮಾಧ್ಯಮದವರು ಸಹಕರಿಸಬೇಕಾಗಿ ಕೋರಿದೆ.
— CP Bengaluru ಪೊಲೀಸ್ ಆಯುಕ್ತ ಬೆಂಗಳೂರು (@CPBlr) March 2, 2024
ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಭಯೋತ್ಪಾದಕರು ಇಲ್ಲಿ ಮಾಡೋದೇನಿಲ್ಲ, ಇಲ್ಲೇ ಭಯೋತ್ಪಾದರನ್ನ ಸೃಷ್ಟಿಸಿದ್ದಾರೆ: ಸೂಲಿಬೆಲೆ
ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿರುವುದುದಿಲ್ಲ. https://t.co/sle7T39aSg
— CP Bengaluru ಪೊಲೀಸ್ ಆಯುಕ್ತ ಬೆಂಗಳೂರು (@CPBlr) March 2, 2024
ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಏನಿದು ಪ್ರಕರಣ?
ಹೆಚ್‌ಎಎಲ್‌ನಲ್ಲಿರುವ ಬ್ರೂಕ್‌ಫೀಲ್ಡ್‌ನ ದಿ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಬಾಂಬ್ ಸ್ಫೋಟಗೊಂಡಿದೆ. ಕೆಫೆಯಲ್ಲಿ ತಿಂಡಿ ತಿನ್ನಲು ಬಂದಿದ್ದ ವ್ಯಕ್ತಿಯೊಬ್ಬನ ಮೇಲೆ ಶಂಕೆ ವ್ಯಕ್ತವಾಗಿದೆ. ಆತ ತಂದಿದ್ದ ಕಪ್ಪು ಬಣ್ಣದ ಬ್ಯಾಗ್‌ನ್ನು ಕೆಫೆಯಲ್ಲೇ ಬಿಟ್ಟು ಹೋಗಿದ್ದಾನೆ. ಇದರಿಂದ ಟೈಮರ್ ಚಾಲಿತ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ: ಸ್ಫೋಟದಲ್ಲಿ ಗಾಯಗೊಂಡವರ ಎಲ್ಲಾ ಖರ್ಚು ಸರ್ಕಾರ ನೋಡಿಕೊಳ್ಳುತ್ತೆ: ಸಿಎಂ