ಬೆಂಗಳೂರು: ಸಿಲಿಕಾನ್ ಸಿಟಿಯ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಇ-ಮೇಲ್ ಬೆದರಿಕೆ ಕೇಳಿಬಂದ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ ಇಲಾಖೆ ತೀವ್ರ ತಪಾಸಣೆ ಕೈಗೊಂಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಅವರು, ಈಗಾಗಲೇ ಬೆದರಿಕೆ ಇ-ಮೇಲ್ ಮಾಡಲಾಗಿದ್ದ ಶಾಲೆಗಳಿಗೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಬಾಂಬ್ ಪತ್ತೆ ಸಿಬ್ಬಂದಿ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣೆಯಲ್ಲಿ ತೊಡಗಿದ್ದ ರಾಜ್ಯದ ತಂಡಕ್ಕೆ ಗಣ್ಯರ ಅಭಿನಂದನೆ
Advertisement
Advertisement
ಬೆಂಗಳೂರು ನಗರದ ಕೆಲವು ಶಾಲೆಗಳಿಗೆ ಬೆದರಿಕೆ ಕರೆ ಬಂದಿದೆ. ಈ ಬಗ್ಗೆ ನಮಗೆ ಮಾಹಿತಿ ಬಂದಕೂಡಲೇ ಕ್ರಮ ಕೈಗೊಳ್ಳಲಾಗಿದೆ. ಈ ಎಲ್ಲಾ ಶಾಲೆಗಳಿಗೆ ನಮ್ಮ ಬಾಂಬ್ ನಿಷ್ಕ್ರಿಯ ದಳ ಹೋಗಿ ತಪಾಸಣೆ ನಡೆಸಿದೆ. ಈ ಹಿಂದೆಯೂ ಸಹ ಈ ರೀತಿ ಬೆದರಿಕೆ ಕರೆ ಬಂದಿತ್ತು. ಬಹುಶಃ ಇದು ಸುಳ್ಳು ಬಾಂಬ್ ಬೆದರಿಕೆ ಅನ್ನಿಸುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
Advertisement
15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ:
ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಆಗಂತುಕರು ಬಾಂಬ್ ಬೆದರಿಕೆ ಹಾಕಿದ್ದಾರೆ. ಇ-ಮೇಲ್ ಮೂಲಕ ನಗರದ ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 7 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ.
Advertisement
ಕಳೆದ ವರ್ಷವೂ ಬೆಂಗಳೂರು ನಗರದ 4 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಅಂದು ಕೂಡ ಇ-ಮೇಲ್ ಮಾಡಿರುವ ಆಗಂತುಕರು, ನಿಮ್ಮ ಶಾಲೆಯಲ್ಲಿ ಶಕ್ತಿಶಾಲಿ ಬಾಂಬ್ ಇರಿಸಲಾಗಿದ್ದು. ಎಚ್ಚರಿಕೆ ವಹಿಸುವುದು ನಿಮ್ಮ ಕರ್ತವ್ಯ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಹೇಳಲಾಗಿತ್ತು. ಇದನ್ನೂ ಓದಿ: COP28 Summit: ದುಬೈ ತೆರಳಿದ ಮೋದಿಗೆ ಅದ್ಧೂರಿ ಸ್ವಾಗತ – ಹಿಂದೂಸ್ತಾನ್ ಹಮಾರ ಎಂದ ಭಾರತೀಯರು
ಮಹದೇವಪುರದ ಗೋಪಾಲನ್ ಇಂಟರ್ನ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳು ಬೆದರಿಸಿದ್ದರು. ಕೂಡಲೇ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ದೌಡಾಯಿಸಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದರು.