ಬೆಂಗಳೂರು: ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆಯ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ, ವೀಡಿಯೋ ಪಡೆದು ಎಫ್‌ಎಸ್‌ಎಲ್‌ಗೆ ಕಳುಹಿಸಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ.
ವೀಡಿಯೋ ಬಗ್ಗೆ ಪೊಲೀಸರಿಗೆ ಈವರೆಗೂ ಸ್ಪಷ್ಟನೆ ಸಿಕ್ಕಿಲ್ಲ. ಮಾಧ್ಯಮಗಳಿಂದ Raw footage ಪಡೆದು ಪರಿಶೀಲನೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ಸುದ್ದಿ ಭಿತ್ತರಿಸಿದ ಪ್ರತಿ ಮಾಧ್ಯಮಗಳಿಂದ ವೀಡಿಯೋಗಳನ್ನು ಪಡೆದು ಎಫ್‌ಎಸ್‌ಎಲ್‌ಗೆ ಕಳಿಸಿಕೊಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಪಾಕ್ ಜಿಂದಾಬಾದ್ ಘೋಷಣೆ – ಸುಮೊಟೋ ಕೇಸ್ ದಾಖಲಿಸಿದ ಪೊಲೀಸರು
ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ನ ಮೂವರು ಮತ್ತು ಬಿಜೆಪಿ ಒಬ್ಬ ಅಭ್ಯರ್ಥಿ ಜಯ ಸಾಧಿಸಿದ್ದಾರೆ. ಕಾಂಗ್ರೆಸ್‌ನ ನಾಸಿರ್ ಹುಸೇನ್ ಗೆಲುವು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೇಳಿಬಂದಿದೆ ಎಂದು ಆರೋಪಿಸಲಾಗಿದೆ.
ಈ ಆರೋಪವನ್ನು ಕಾಂಗ್ರೆಸ್ ನಾಯಕರು ಅಲ್ಲಗಳೆದಿದ್ದಾರೆ. ಆದರೆ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: 2026 ರ ಅಸೆಂಬ್ಲಿ ಚುನಾವಣೆ ಹೊತ್ತಿಗೆ ಕೆಲವೇ ಮುಸ್ಲಿಮರು ಕಾಂಗ್ರೆಸ್‌ನಲ್ಲಿ ಉಳಿಯುತ್ತಾರೆ: ಅಸ್ಸಾಂ ಸಿಎಂ