ಬೆಂಗಳೂರು: ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಿದ್ದು ಗಂಭೀರವಾಗಿ ಗಾಯವಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾನೆ.
Advertisement
19 ವರ್ಷದ ಕೌಶಿಕ್ ಸಾವನ್ನಪ್ಪಿದ ಬೈಕ್ ಸವಾರ. ಅತ್ತಿಗುಪ್ಪೆ ಬಳಿ ವಿಜಯನಗರ ಸಂಚಾರಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿರುವಾಗ ಕೌಶಿಕ್ ಸ್ನೇಹಿತನ ಬೈಕ್ ನಲ್ಲಿ ಬರುತ್ತಿರುವಾಗ ಪೊಲೀಸರು ಬೈಕ್ ತಡೆಯಲು ಪ್ರಯತ್ನಿಸಿದ್ದಾರೆ. ಇದನ್ನೂ ಓದಿ: ಶತಕ ಸಿಡಿಸಿ ರಜನಿಕಾಂತ್ ಸ್ಟೈಲ್‍ನಲ್ಲಿ ಸಂಭ್ರಮಿಸಿದ ವೆಂಕಟೇಶ್ ಅಯ್ಯರ್
Advertisement
Advertisement
ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಕೌಶಿಕ್ ಅಂಡ್ ಟೀಂ ಮುಂದಾಗುವಾಗ ಡಿವೈಡರ್ ಗೆ ಡಿಕ್ಕಿ ಹೊಡೆದು ಕೌಶಿಕ್ ತಲೆಗೆ ಗಂಭೀರವಾಗಿ ಗಾಯವಾಗಿದೆ. ಕೂಡಲೇ ಬೈಕ್ ಸವಾರ ಕೌಶಿಕ್ ನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಕೌಶಿಕ್ ಬ್ರೈನ್ ಡೆಡ್ ಆಗಿರೋ ಬಗ್ಗೆ ಖಚಿತ ಪಡಿಸಿ ಚಿಕಿತ್ಸೆ ಕೊಡುತ್ತಿದ್ದರು. ಮುಂಜಾನೆ ಕೌಶಿಕ್ ಸಾವನ್ನಪ್ಪಿದ್ದಾನೆ.
Advertisement
ಘಟನೆ ಸಂಬಂಧ ವಿಜಯ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮನುಷ್ಯರು ಬದುಕಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ: ಬಾಲಕೃಷ್ಣ