ಬೆಂಗಳೂರು: ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಬೈಕ್ ಮತ್ತು ಕಾರಲ್ಲಿ ಮೋಜು ಮಸ್ತಿ ಮಾಡುತ್ತಾರೆ. ವಿದ್ಯಾರ್ಥಿಗಳು ಮೋಜು ಮಸ್ತಿ ಮಾಡಲು ತೆರಳಿದ ವೇಳೆಯಲ್ಲಿ ಸಾಕಷ್ಟು ಅಪಘಾತ ಪ್ರಕರಣಗಳು ಕೂಡ ನಡೆದಿರುವ ಉದಾಹರಣೆಯಿದ್ದು, ಹಾಗಾಗಿ ಪೊಲೀಸರು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದೆ.
ಇದೀಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಬೆಂಗಳೂರು ಪೊಲೀಸರು, ಶಾಲಾ-ಕಾಲೇಜುಗಳಿಗೆ ಒಂದು ಸೂಚನೆ ಕೊಟ್ಟಿದ್ದು, ಯಾವ ವಿದ್ಯಾರ್ಥಿ ಬಳಿ ಡ್ರೈವಿಂಗ್ ಲೈಸೆನ್ಸ್ ಇರುವುದಿಲ್ಲವೋ ಆ ವಿದ್ಯಾರ್ಥಿಗೆ ವಾಹನ ನಿಲ್ಲಿಸಲು ಶಾಲಾ-ಕಾಲೇಜು ಆವರಣದಲ್ಲಿ ಅವಕಾಶ ನೀಡಬಾರದು ಎಂದು ಹೇಳಿದೆ.
Advertisement
ಶಿಕ್ಷಣ ಇಲಾಖೆಗೆ 2016 ಜುಲೈ 30ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಇದೀಗ ಕಟ್ಟುನಿಟ್ಟಾಗಿ ಜಾರಿಯಾಗುವ ಮುನ್ಸೂಚನೆ ಕಂಡು ಬರುತ್ತಿದೆ. ಎಲ್ಲಾ ಶಾಲಾ-ಕಾಲೇಜುಗಳು ಸ್ವಂತ ವಾಹನದಲ್ಲಿ ಬರುವ ವಿದ್ಯಾರ್ಥಿಗಳ ಚಾಲನ ಪರವಾನಗಿ ಬಗ್ಗೆ ಪರಿಶೀಲನೆ ನಡೆಸುತ್ತಿವೆ. ನಿಯಮದ ಪ್ರಕಾರ 18 ವರ್ಷ ಪೂರ್ಣಗೊಳ್ಳದ ವಿದ್ಯಾರ್ಥಿಗಳಿಗೆ ಡಿಎಲ್ ಸಿಗಲ್ಲ.