ಬೆಂಗಳೂರು: ಭಾರತದ ಪ್ರವಾಸಕ್ಕೆ (India Tour) ಬಂದಿರುವ ವಿದೇಶಿ ಪ್ರವಾಸಿಗನ ಮೇಲೆ ಕಿರುಕುಳ ನೀಡಿದ್ದ ಪುಂಡನನ್ನು ಬೆಂಗಳೂರು ಪೊಲೀಸರು (Bengaluru Police) ಬಂಧಿಸಿದ್ದಾರೆ.
ನವಾಬ್ ಹಯಾತ್ ಶರೀಫ್ ಬಂಧಿತ ಆರೋಪಿ. ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.
Advertisement
Pertaining to this, action has been taken and the concerned person rounded up. Strict action will be taken against him. No such misbehaviour with foreign tourists will be tolerated. https://t.co/EsrOvP4gZ7
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) June 12, 2023
Advertisement
ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಬೆಂಗಳೂರು ಪೊಲೀಸ್, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿದೇಶಿ ಪ್ರವಾಸಿಗರೊಂದಿಗೆ ಇಂತಹ ಅನುಚಿತ ವರ್ತನೆಯನ್ನು ಸಹಿಸುವುದಿಲ್ಲ ಎಂದು ಹೇಳಿದೆ.
Advertisement
ಏನಿದು ಪ್ರಕರಣ?
ನೆದರ್‌ಲ್ಯಾಂಡ್ ಮೂಲದ ಮ್ಯಾಡ್ಲಿ ರೋವರ್ (Madly Rover) ಬೆಂಗಳೂರಿನ ಚಿಕ್ಕಪೇಟೆಯಲ್ಲಿ ವೀಡಿಯೋ ಮಾಡುತ್ತಾ ಸುತ್ತುತ್ತಿದ್ದರು. ಸಂಡೇ ಬಜಾರ್‌ನಲ್ಲಿ ಸೆಲ್ಫಿ ವಿಡಿಯೋ ಮಾಡುತ್ತಿದ್ದಾಗ ನವಾಬ್ ಹಯಾತ್ ಶರೀಫ್ ವಿಡಿಯೋ ಮಾಡದಂತೆ ಹಲ್ಲೆಗೆ ಯತ್ನಿಸಿದ್ದಾನೆ. ಇದನ್ನೂ ಓದಿ: ಜೊತೆಯಾಗಿ ಸ್ನಾನಕ್ಕೆ ಹೋದವರು ಹೆಣವಾದ್ರು – ಹಸೆಮಣೆ ಏರಬೇಕಿದ್ದ ಜೋಡಿಯ ದುರಂತ ಅಂತ್ಯ
Advertisement
ಸಾಮಾಜಿಕ ಜಾಲತಾಣದಲ್ಲಿ (Social Meida) ವೀಡಿಯೋ ಹರಿದಾಡುತ್ತಿದ್ದಂತೆ ಬಹಳ ಟೀಕೆ ವ್ಯಕ್ತವಾಗಿತ್ತು. ನೆಟ್ಟಿಗರು ಖಂಡನೆ ವ್ಯಕ್ತಪಡಿಸಿ ಬೆಂಗಳೂರು ಪೊಲೀಸರಿಗೆ (Bengaluru Police) ಟ್ಯಾಗ್ ಮಾಡಿ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಟ್ವೀಟ್ ಮಾಡಿದ್ದರು.
ಅತಿಥಿ ದೇವೋ ಭವ ಎಂಬ ಪರಿಕಲ್ಪನೆ ಇರುವ ದೇಶದಲ್ಲಿ ದೌರ್ಜನ್ಯ ನಡೆದಿದೆ. ಪೊಲೀಸರು ಕೂಡಲೇ ಎಚ್ಚೆತ್ತು ಈ ರೀತಿ ಕಿರುಕುಳ ನೀಡುವ ಪುಂಡರಿಗೆ ಬಿಸಿ ಮುಟ್ಟಿಸಬೇಕೆಂದು ಜನ ಕಮೆಂಟ್ ಮಾಡಿ ಆಗ್ರಹಿಸಿದ್ದರು.