ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ರೌಡಿಶೀಟರ್ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ.
Advertisement
ಪಶ್ಚಿಮ ವಿಭಾಗದ 6 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಮಾಗಡಿ ರೋಡ್ ಮತ್ತು ಕೆಪಿ ಅಗ್ರಹಾರ, ಬ್ಯಾಟರಾಯನ ಪುರ, ಕಾಟನ್ ಪೇಟೆ, ಜೆಜೆ ನಗರ, ಚಾಮರಾಜಪೇಟೆ ಹಾಗೂ ಕೆಂಗೇರಿ, ವಿಜಯನಗರದಲ್ಲಿ ವಾಸವಾಗಿರುವ ರೌಡಿಶೀಟರ್ ಹಾಗೂ ಗಾಂಜಾ ಪೆಡ್ಲರ್‌ಗಳ ಮನೆಗಳ ಮೇಲೆ ಡಿಸಿಪಿ, ಎಸಿಪಿ, ಇನ್ಸ್‌ಪೆಕ್ಟರ್ ದಾಳಿ ನಡೆಸಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದಂತೆ ಬಿಸಿ ಮುಟ್ಟಿಸಿದ್ದಾರೆ. ಇದನ್ನೂ ಓದಿ: ನಾಳೆ ಪುನೀತ್ 11ನೇ ದಿನದ ಪುಣ್ಯಾರಾಧನೆ – ಅಪ್ಪು ಕುಟುಂಬಸ್ಥರಿಂದ ಭಾರೀ ಸಿದ್ಧತೆ
Advertisement
Advertisement
ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಪೆಡ್ಲರ್ ಗಳು, ಜೊತೆಗೆ ನ್ಯಾಯಲಯದಿಂದ ಸಮನ್ಸ್ ಇದ್ದರೂ ಕೂಡ ಹಾಜರಾಗದೇ ತಲೆ ಮರೆಸಿಕೊಂಡ ಆರೋಪಿಗಳು, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದಂತಹ ರೌಡಿಶೀಟರ್‍ಗಳನ್ನು ಕರೆತಂದು ಪೊಲೀಸ್ ಠಾಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ.
Advertisement
ಒಟ್ಟು 180 ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದ್ದು, 123 ಮಂದಿ ರೌಡಿಗಳು ಮತ್ತು ಡ್ರಗ್ ಪೆಡ್ಲರ್‍ಗಳನ್ನ ಠಾಣೆಗೆ ಕರೆತಂದು ಎಚ್ಚರಿಕೆ ನೀಡಿದೆ. ಇನ್ನೂ 600 ಮಂದಿ ಪೊಲೀಸರಿಂದ ಈ ಕಾರ್ಯಚರಣೆ ನಡೆಸಲಾಗಿದೆ. ಇದನ್ನೂ ಓದಿ: ಸ್ಪೆಷಲ್ ಚಿಕನ್ ಸೂಪ್ ಸಖತ್ ಟೇಸ್ಟಿ