ಬೆಂಗಳೂರು: ರಸ್ತೆ ಗುಂಡಿ ವಿಚಾರವಾಗಿ ಬಿಬಿಎಂಪಿ ಮತ್ತೊಮ್ಮೆ ಹೈಕೋರ್ಟ್ ಸಿಟ್ಟಿಗೆ ಗುರಿಯಾಗಿದೆ. ಬಿಬಿಎಂಪಿ ಇಂಜಿನಿಯರ್‌ಗಳನ್ನೇ ಬದಲಿಸಲು ಸರ್ಕಾರಕ್ಕೆ ಸೂಚಿಸುತ್ತೇವೆ ಅಂತ ನ್ಯಾಯಪೀಠ ಎಚ್ಚರಿಕೆ ನೀಡಿದೆ.
ಸಾವಿರಾರು ಕೋಟಿ ನೀಡಿದರೂ ರಸ್ತೆ ಸರಿಯಾಗುತ್ತಿಲ್ಲ. ಜನ ಬಲಿಯಾಗೋದು ಕಡಿಮೆಯಾಗುತ್ತಿಲ್ಲ ಎಂದು ಹೇಳಿ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಸುರಕ್ಷಿತವಾಗಿ ಮಗಳು ಭಾರತಕ್ಕೆ – ಪ್ರಯಾಣದ ಖರ್ಚನ್ನು ಪಿಎಂ ಕೇರ್ಸ್ ಫಂಡ್‍ಗೆ ನೀಡಿದ ತಂದೆ
Advertisement
Advertisement
ಹೈಕೋರ್ಟ್ ಎಚ್ಚರಿಕೆಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ರಸ್ತೆ ಗುಣಮಟ್ಟದಲ್ಲಿ ರಾಜಿ ಆಗುವುದಿಲ್ಲ. ಹೈಕೋರ್ಟ್ ಆದೇಶ ಪಾಲಿಸ್ತೇವೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಮಾರ್ಚ್ 15 ರೊಳಗೆ ವರದಿ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ಭಾರತದ ಮೇಲೆ ಯುದ್ಧದ ಎಫೆಕ್ಟ್: ಖಾದ್ಯತೈಲ, ಗೋಧಿ, ಸಿಮೆಂಟ್, ಕಬ್ಬಿಣ ದುಬಾರಿ
Advertisement
ಇದೇ ವೇಳೆ, ನಿರ್ಬಂಧ ಇದ್ದರೂ ಮಿಟ್ಟಗಾನಹಳ್ಳಿ ಕ್ವಾರಿಯಲ್ಲಿ ಕಸ ತುಂಬುತ್ತಿರುವುದನ್ನು ಹೈಕೋರ್ಟ್ ಆಕ್ಷೇಪಿಸಿದೆ. ಕೋರ್ಟ್ ಆದೇಶ ಉಲ್ಲಂಘಿಸಿದರೆ ಆಯುಕ್ತರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ವಾರ್ನಿಂಗ್ ನೀಡಿದೆ. ಮುಖ್ಯ ಆಯುಕ್ತರು ಈ ವಿಚಾರಕ್ಕೆ ಕ್ಷಮೆ ಕೋರಿದ್ದಾರೆ.