ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ (Bengaluru) ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು. ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ (Potholes) ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ. ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷವಾಗಿವೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಟ್ವೀಟ್ನಲ್ಲಿ ಏನಿದೆ?
ನಾಡಪ್ರಭು ಶ್ರೀಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು. ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ. ರಸ್ತೆಗುಂಡಿಗಳು ಸಾವಿನ ಗುಂಡಿಗಳಾಗಿವೆ. ನಗರದ ಲುಲೂ ಮಾಲ್ (LuLu Hypermarket) ಎದುರಿನ ರಸ್ತೆಯಲ್ಲಿ ಗುಂಡಿಗೆ ಇನ್ನೊಂದು ಜೀವ ಬಲಿಯಾದ ಮೇಲೆ ಎಚ್ಚೆತ್ತುಕೊಳ್ಳುವ ನಾಟಕ ನಡೆದಿದೆ. ಶಾಶ್ವತ ಪರಿಹಾರ ಎಲ್ಲಿ? ಬೆಂಗಳೂರಿನಲ್ಲಿ ಕೊಲೆಪಾತಕ ಗುಂಡಿಕೂಪಗಳು ಸರಣಿ ಸಾವುಗಳಿಗೆ ಕಾರಣವಾಗಿದ್ದರೆ, ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷವಾಗಿವೆ. ಇದನ್ನೂ ಓದಿ: ಮಳವಳ್ಳಿ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಿಸಿದ ಜಮೀರ್
ರಾಜ್ಯ ಬಿಜೆಪಿ (BJP) ಸರ್ಕಾರಕ್ಕೆ ರಸ್ತೆ ಗುಂಡಿಗಳು ಎಂದರೆ ಬಲು ಇಷ್ಟ. ಗುಂಡಿಗಳು ಬಿದ್ದಷ್ಟೂ ಕಿಸೆಗೆ ಹರಿದು ಬರಲಿದೆ ದುಡ್ಡು. ಇವರಿಗೆ ಹೈಕೋರ್ಟ್ ಛೀಮಾರಿ ಹಾಕಿದರೂ ನಾಚಿಕೆ, ಸಂಕೋಚ ಎನ್ನುವುದಿಲ್ಲ. ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ಕೊಟ್ಟರೂ ಅಧಿಕಾರಿಗಳು ಭಂಡತನ ಬಿಡುತ್ತಿಲ್ಲ. ಗುಂಡಿ ಬಿದ್ದ ರಸ್ತೆಗಳು ರಾಜ್ಯದ ಗೌರವವನ್ನು ಮೂರಾಬಟ್ಟೆ ಮಾಡುತ್ತಿರುವುದು ಒಂದೆಡೆ, ಇನ್ನೊಂದೆಡೆ ಸರ್ಕಾರ ಜಾಗತಿಕ ಹೂಡಿಕೆದಾರರ ಸಮಾವೇಶ, ಜಾಗತಿಕ ತಂತ್ರಜ್ಞಾನ ಶೃಂಗ ನಡೆಸುತ್ತಿದೆ. ‘ರಸ್ತೆ ಗುಂಡಿಗಳ ಶೃಂಗ’ (Potholes Summit)ವನ್ನೂ ನಡೆಸಿದರೆ ಇನ್ನೂ ಚೆನ್ನಾಗಿರುತ್ತದೆ! ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರ್ಕಾರವೇ ನೇರ ಕಾರಣ. ಮುಗ್ಧ ಜನರು ಸಾವು ನೋವುಗಳಿಗೆ ಬಿಬಿಎಂಪಿಯೇ ಸಂಪೂರ್ಣ ಹೊಣೆ. ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳೇ ಇದಕ್ಕೆ ಉತ್ತರದಾಯಿಗಳು. ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ ಮತ್ತೊಂದು ಕೇಸ್- ಮಠದ ಹಾಸ್ಟೆಲ್ನಲ್ಲಿ ಇಬ್ಬರು ಬಾಲಕಿಯರು ಪತ್ತೆ
ನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು.
ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ.1/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 19, 2022
ಪಾಲಿಕೆ ಮಾಡಿದ ಪಾಪಕ್ಕೆ ನತದೃಷ್ಟ ಮಹಿಳೆ ಉಮಾದೇವಿ ಅವರು ಬಲಿಯಾಗಿದ್ದಾರೆ. ಅವರಿಗೆ ಪರಿಹಾರ ಕೊಟ್ಟು ಕೈತೊಳೆದುಕೊಳ್ಳುವುದಲ್ಲ. ಇನ್ನಾದರೂ ಗುಂಡಿಗಳನ್ನು ಮುಚ್ಚಬೇಕು ಹಾಗೂ ರಸ್ತೆಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು. ಮೃತ ಮಹಿಳೆ ಶ್ರೀಮತಿ ಉಮಾದೇವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ರಾಜ್ಯ ಸರ್ಕಾರ ಅವರಿಗೆ ಸುಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂಬುದು ನನ್ನ ಒತ್ತಾಯ ಎಂದು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.