ಬೆಂಗಳೂರು: ರಸ್ತೆಯಲ್ಲಿ ಬೇಕೆಂದೇ ಮೊಳೆಗಳನ್ನು ಚೆಲ್ಲಿ (Throwing Nails) ಬೈಕ್ ಮತ್ತು ಕಾರುಗಳನ್ನು ಪಂಚರ್(Puncture) ಮಾಡುತ್ತಿದ್ದ ಇಬ್ಬರು ಖದೀಮರನ್ನು ಜಾಲಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳು ಜಾಲಹಳ್ಳಿಯ ಎಂಇಎಸ್ (MES) ರಿಂಗ್ ರಸ್ತೆ ಬದಿಯಲ್ಲಿ ಪಂಚರ್ ಶಾಪ್(Puncture Shop) ನಡೆಸುತ್ತಿದ್ದರು ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ತಮ್ಮ ಅಂಗಡಿಗೆ ವ್ಯಾಪಾರ ಹೆಚ್ಚಿಸಿಕೊಳ್ಳುವ ದುರಾಸೆಯಿಂದ, ಇವರು ಬೈಕ್‌ನಲ್ಲಿ ಬಂದು ರಸ್ತೆಯುದ್ದಕ್ಕೂ ಕೆಜಿಗಟ್ಟಲೆ ಮೊಳೆಗಳನ್ನು ಚೆಲ್ಲಿ ಹೋಗುತ್ತಿದ್ದರು. ಸವಾರರು ಪಂಚರ್ ಆದ ವಾಹನಗಳನ್ನು ತಳ್ಳಿಕೊಂಡು ಬಂದಾಗ ರಸ್ತೆ ಬದಿಯಲ್ಲೇ ಪ್ರತ್ಯಕ್ಷರಾಗಿ ಪಂಚರ್ ಹಾಕಿಕೊಡುವ ನಾಟಕವಾಡುತ್ತಿದ್ದರು.
ಸತತವಾಗಿ ವಾಹನಗಳು ಪಂಚರ್ ಆಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಾಗೃತರಾದ ಬೆಂಗಳೂರು ಟ್ರಾಫಿಕ್ ಪೊಲೀಸರು(Bengaluru Traffic Police) ಆ ಪ್ರದೇಶದ ಪರಿಶೀಲನೆ ನಡೆಸಿದ್ದರು. ಈ ವೇಳೆ ರಸ್ತೆಯಲ್ಲಿ ಅಪಾರ ಪ್ರಮಾಣದ ಮೊಳೆಗಳು ಪತ್ತೆಯಾಗಿದ್ದವು. ತಕ್ಷಣವೇ ಸಿಸಿಟಿವಿ ಕ್ಯಾಮೆರಾ (CCTV Camera) ದೃಶ್ಯಾವಳಿಗಳನ್ನು ತನಿಖೆಗೊಳಪಡಿಸಿದಾಗ, ಆರೋಪಿಗಳು ಬೈಕ್‌ನಲ್ಲಿ ಬಂದು ರಸ್ತೆಗೆ ಮೊಳೆ ಚೆಲ್ಲುವ ದೃಶ್ಯಗಳು ಸ್ಪಷ್ಟವಾಗಿ ಸೆರೆಯಾಗಿದ್ದವು. ಇದನ್ನೂ ಓದಿ: ಬೆಂಗಳೂರಿನಲ್ಲಿ ಪಂಚರ್ ಮಾಫಿಯಾ| ನಾಗಸಂದ್ರ – ಗೊರಗುಂಟೆಪಾಳ್ಯ ರಸ್ತೆಯಲ್ಲಿ ರಾಶಿ ರಾಶಿ ಮೊಳೆಗಳು
ಅವರು ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲುತ್ತಾ ಸಾಗಿದ್ದಾರೆ. ಸಾಕ್ಷ್ಯದ ಸುಳಿವು ನಮ್ಮ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.
ಕೆಂಪು ಬಣ್ಣದ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ರಸ್ತೆಯಲ್ಲಿ ಉದ್ದೇಶಪೂರ್ವಕವಾಗಿ ಮೊಳೆಗಳನ್ನು ಎಸೆಯುತ್ತಿರುವುದು ದಾಖಲಾಗಿದೆ. ಎಎನ್‌ಪಿಆರ್ (ANPR) ದೃಶ್ಯಾವಳಿಗಳ ಆಧಾರದ ಮೇಲೆ ಪ್ರಕರಣ… pic.twitter.com/SwzwE28JE4— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) July 29, 2026
