ಬೆಂಗಳೂರು: ರಾತ್ರಿ (Bengaluru Rain) ಸುರಿದ ಭಾರೀ ಮಳೆಗೆ ಮಾನ್ಯತಾ ಟೆಕ್ ಪಾರ್ಕ್ (Manyata Tech Park) ಜಲಾವೃತವಾಗಿದೆ.
ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಮಳೆ ನೀರು ನಿಂತಿರುವುದರಿಂದ ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸಬೇಕೆಂದು ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಸಿಸಿಬಿ ಕಚೇರಿ ಜಲಾವೃತ | ಬೊಮ್ಮನಹಳ್ಳಿ -ಸಿಲ್ಕ್ ಬೋರ್ಡ್ ರಸ್ತೆಯಲ್ಲಿ 3 ಅಡಿ ನೀರು
“ಸಂಚಾರಸಲಹೆ“
ಮಾನ್ಯಥಾ ಟೆಕ್ ಪಾರ್ಕ್ ನಲ್ಲಿ ಮಳೆ ನೀರು ನಿಂತಿರುವುದರಿಂದ ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸಲು ಸೂಚಿಸಲಾಗಿದೆ. pic.twitter.com/GIaJPrgB9a
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) May 19, 2025
ಮಹಾದೇವಪುರ, ಬೆಂಗಳೂರು ಪೂರ್ವ ವಲಯ, ಬೊಮ್ಮನಹಳ್ಳಿ, ಯಲಹಂಕ ವಲಯದಲ್ಲಿ ಭಾರೀ ಮಳೆಯಾಗಿದ್ದು, 4 ವಲಯದ 100 ಕ್ಕೂ ಹೆಚ್ಚು ಪ್ರದೇಶಗಳಿಗೆ ಸಮಸ್ಯೆಯಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ವರುಣನ ಅಬ್ಬರ – 10 ವರ್ಷದಲ್ಲಿ ಮೇ ತಿಂಗಳಲ್ಲಿ ದಾಖಲೆಯ ಮಳೆ
ಹಲವು ಮನೆಗಳಿಗೆ ನೀರು ನುಗ್ಗಿ ಲೇಔಟ್ ಗಳು ಜಲಾವೃತಗೊಂಡಿದೆ. ಶಾಂತಿನಗರ, ಕೋರಮಂಗಲ, ಬೊಮ್ಮನಹಳ್ಳಿಯಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ.
ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ನಾಗವಾರ ವಾರ್ಡ್‌ನಲ್ಲಿ ನಿವಾಸಿಗಳು ರಾತ್ರಿ ಜಾಗರಣೆ ಮಾಡಿದ್ದಾರೆ. Bengaluru Rain| ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಬಂದ್ – ಶಿವಾನಂದ ಸರ್ಕಲ್ ಅಂಡರ್ ಪಾಸ್ ಮುಳುಗಡೆ