ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿಂದು (Bengaluru) ಏಕಾಏಕಿ ಮಳೆ ಅಬ್ಬರಿಸಿದೆ. ಸಂಜೆ ಸುರಿದ ಮಳೆಯಿಂದ ಭಾರೀ ಅವಾಂತರ ಸೃಷ್ಟಿಯಾಗಿದೆ. ಇದೇ ವೇಳೆ ಮಣ್ಣು ಕುಸಿದು ಓರ್ವ ಕಟ್ಟಡ ಕಾರ್ಮಿಕ ಬಲಿಯಾಗಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಟ್ಟಡ ನಿರ್ಮಾಣಕ್ಕಾಗಿ ಅಗೆಯುವಾಗ ಮಣ್ಣು ಕುಸಿದು ಎಂಬಾಸಿ ಗ್ರೂಪ್‌ಗೆ ಸೇರಿದ ಕಾರ್ಮಿಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಬೆಂಗಳೂರು | ಸ್ವಚ್ಛತಾ ಕಾರ್ಮಿಕರಿಗೆ ʻಜಲಮಂಡಳಿ ಅನ್ನಪೂರ್ಣ ಯೋಜನೆʼ ಸ್ಮಾರ್ಟ್ ಕಾರ್ಡ್ ವಿತರಣೆ
ಮಳೆ ನೀರು ಜಾಸ್ತಿ ಹರಿದ ಪರಿಣಾಮ ಮಣ್ಣು ಕುಸಿದಿದೆ, ಈ ವೇಳೆ ಮಣ್ಣಿನಡಿ ಸಿಲುಕಿ ಆಂಧ್ರ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ. ಇನ್ನೂ ಮತ್ತೋರ್ವನ ಸ್ಥಿತಿಯೂ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿಗೆ ಕನ್ನಡ ಬರುತ್ತಾ ಅಂತ ಕೇಳಿದ ಸಿಎಂ – ಸ್ವಲ್ಪ ಸ್ವಲ್ಪ ಬರುತ್ತೆ; ಮುರ್ಮು ಉತ್ತರ
ಸಂಜೆ ಮಳೆಗೆ ಭಾರಿ ಅವಾಂತರ
ಕಳೆದ 2-3 ದಿನಗಳಿಂದ ಆಗೊಮ್ಮೆ ಈಗೊಮ್ಮೆ ಮಳೆ ಬಂದು ಹೋಗುತ್ತಿತ್ತು. ಆದ್ರೆ ಸೆಪ್ಟೆಂಬರ್ ಮೊದಲ ದಿನವೇ ಜೋರು ಮಳೆ ಸುರಿದಿದೆ. ಮಳೆಗಾಲದ ದಿನಗಳಿಗೆ ಹೋಲಿಸಿದ್ರೆ ಸೋಮವಾರ ಸಂಜೆ ಸುರಿದ ಮಳೆ ಬಿರುಸಾಗಿತ್ತು. ರಸ್ತೆಯಲ್ಲಿ ಜನ, ವಾಹನ ಸಂಚಾರ ಸಾಧ್ಯವಾಗದಷ್ಟು ಜೋರಿತ್ತು. ಮಿಂಚು ಗುಡುಗು ಕೂಡ ಇದ್ದು ಜನ ಭಯ ಭೀತರಾದರು. ವಾಹನ ಸವಾರರು ಮಳೆಯಲ್ಲಿ ಸಂಚಾರ ಮಾಡುವ ಧೈರ್ಯ ಮಾಡದೇ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿ ಮರ, ಕಟ್ಟಡಗಳ ಬಳಿ ಆಶ್ರಯ ಪಡೆದಿದ್ದರು. ಇನ್ನೂ ಅಲ್ಲಲ್ಲಿ ಟ್ರಾಫಿಕ್ ದಟ್ಟಣೆ ಕೂಡ ಉಂಟಾಗಿತ್ತು.
ಎಲ್ಲೆಲ್ಲಿ ಮಳೆಯ ಆರ್ಭಟ ಜೋರು?
ಟೌನ್ ಹಾಲ್, ಕಾರ್ಪೋರೇಷನ್, ಜಯನಗರ, ಜೆಪಿ ನಗರ ಸುತ್ತಮುತ್ತ, ವಿಲ್ಸನ್ ಗಾರ್ಡನ್, ಶಾಂತಿನಗರ, ಲಾಲ್ ಬಾಗ್ ಸುತ್ತಮುತ್ತ, ಮಲ್ಲೇಶ್ವರಂ ರಸ್ತೆ, ಮಂತ್ರಿ ಮಾಲ್ ಯಲ್ಲಿ ಜೋರು ಮಳೆ ಉಂಟಾಗಿತ್ತು. ಅಲ್ಲದೇ ಬಿಬಿಎಂಪಿ ವಲಯ ಕಚೇರಿ ಮುಂದಿನ ರಸ್ತೆಯೇ ತುಂಬಿ ಹರಿಯುತ್ತಿದ್ದ ದೃಶ್ಯವೂ ಕಂಡುಬಂದಿತು. ಅಲ್ಲದೇ ಕೆ.ಆರ್ ಮಾರ್ಕೆಟ್, ಶಾಂತಿನಗರದಲ್ಲೂ ಜೋರು ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿದ್ದವು.
ಇನ್ನೂ ಏಕಾಏಕಿ ಸುರಿದ ಮಳೆಯಿಂದಾಗಿ ಕೆಲ ಸಮಯದ ರಸ್ತೆಯಲ್ಲಿ 2 ರಿಂದ 3 ಅಡಿಯಷ್ಟು ನೀರು ಆವೃತವಾಗಿತ್ತು. ಅಲ್ಲಲ್ಲಿ ಚರಂಡಿ ನೀರು ತುಂಬಿ ಹರಿಯುತ್ತಿದ್ದರಿಂದ ದುರ್ವಾಸನೆ ಬೀರುತ್ತಿತ್ತು. ಇದು ವಾಹನ ಸವಾರರನ್ನೂ ಹೈರಾಣಾಗುವಂತೆ ಮಾಡಿತ್ತು. ಇನ್ನೂ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಅವಾಂತರ ಸೃಷ್ಟಿಯಾಗಿತ್ತು. ಇದನ್ನೂ ಓದಿ: Bengaluru | ಗೋವಿಂದರಾಜನಗರದಲ್ಲಿ ಬ್ರಾಹ್ಮಣ ಭವನ ಉದ್ಘಾಟನೆ