ಬೆಂಗಳೂರು: ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ ಉಂಟಾಗಿದೆ.
ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳ್ಳಂದೂರು ಕೆರೆ ಕೋಡಿ ಹರಿದಿದ್ದು ಈಗ ನೊರೆ ಬೆಟ್ಟದಂತೆ ಶೇಖರಣೆಯಾಗಿದೆ. ಇದರಿಂದಾಗಿ ಬೆಳ್ಳಂದೂರು – ಹೆಚ್‍ಎಎಲ್ ಮಾರ್ಗವಾಗಿ ಸಂಚರಿಸುವ ವಾಹನ ಸವಾರರ ಮೇಲೆ ಗಾಳಿ ಬಂದಾಗ ನೊರೆಯ ಸಿಂಚನವಾಗಿ ಕಿರಿಕಿರಿ ಅನುಭವಿಸುತ್ತಿದ್ದಾರೆ.
Advertisement
Advertisement
ಕೆಲ ವರ್ಷಗಳಿಂದ ಈ ಸಮಸ್ಯೆ ಕಾಡುತ್ತಿದ್ದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿ ಟಿ) ಬಿಬಿಎಂಪಿಗೆ ಹಲವು ಬಾರಿ ಚಾಟಿ ಬೀಸಿದ್ರೂ ಸಂಬಂಧಪಟ್ಟ ಅಧಿಕಾರಿಗಳು ಕೆರೆಯನ್ನು ಶುಚಿಗೊಳಿಸಿ, ಕೆರೆಗೆ ಬರುವ ಕರುಷಿತ ನೀರಿಗೆ ಕಡಿವಾಣ ಹಾಕದೆ ಇರುವುದರಿಂದ ಈಗ ಮತ್ತೆ ನೊರೆ ಕಾಣಿಸಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
Advertisement
https://www.youtube.com/watch?v=ovmwvtWl0HU