ಬೆಂಗಳೂರು: ರಾಜ್ಯದ ವಿವಿಧೆಡೆ ಬೇಸಿಗೆ ಮಳೆ ಮುಂದುವರೆದಿದೆ. 148 ದಿನಗಳ ಬಳಿಕ ಬೆಂಗಳೂರಿನ (Bengaluru) ಕೆಂಗೇರಿ (Kengeri) ಸೇರಿ ನಗರದ ಹಲವೆಡೆ ವರುಣನ ದರ್ಶನವಾಗಿದೆ. ದೊಡ್ಡಬಳ್ಳಾಪುರ, ನೆಲಮಂಗಲದಲ್ಲಿ ಸಂಜೆ ಮಳೆ ಆಗಿದೆ.
ರಾಮನಗರದ ವಡ್ಡರಹಳ್ಳಿಯಲ್ಲಿ ಬಿರಗಾಳಿಸಹಿತ ಭಾರಿ ಮಳೆಗೆ ಎರಡ್ಮೂರು ಮನೆಗಳ ಮೇಲ್ಛಾವಣಿ ಹಾರಿ ಹೋಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೀನಿ- ನೇಹಾ ಹಂತಕ ಫಯಾಜ್ ತಂದೆ ಕಣ್ಣೀರು
Advertisement
Advertisement
ಹೊಳೆನರಸೀಪುರದಲ್ಲಿ ಮಳೆ ನಡುವೆಯೇ ಸಿಎಂ ಸಿದ್ದರಾಮಯ್ಯ (CM Siddaramaiah) ಭಾಷಣ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ಹಿಡಿದು ಭಾಷಣ ಕೇಳಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್ ಹೆಚ್ಚಾಗುತ್ತಿದೆ, ನಿಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಿ: ಪೋಷಕರಲ್ಲಿ ನೇಹಾ ತಂದೆ ನಿರಂಜನ್ ಮನವಿ
Advertisement
ಕೊಡಗಿನಲ್ಲಿ ಒಂದು ವಾರದಿಂದ ಮಳೆ ಆಗ್ತಿದ್ದು, ಕಾಫಿ ಬೆಳೆಗಾರರಲ್ಲಿ ಮಂದಹಾಸ ಮೂಡಿದೆ. ಚಿತ್ರದುರ್ಗ, ಶಿವಮೊಗ್ಗದಲ್ಲಿ ಗುಡುಗು ಸಿಡಿಲು ಸಹಿತ ಮಳೆ ಆಗಿದೆ.
Advertisement
ಗುರುವಾರ ಮಂಡ್ಯದಲ್ಲಿ ಆದಿಚುಂಚನಗಿರಿ ಕಮಾನು ಉರುಳಿತ್ತು. ಇದರ ಸಿಸಿಟಿವಿ ದೃಶ್ಯ ಇದೀಗ ವೈರಲ್ ಆಗಿದೆ. ರಾಜ್ಯದ ಬಹುತೇಕ ಕಡೆ ಮುಂದಿನ ಮೂರು ದಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.