– ಮೂರು ಪ್ರದೇಶಗಳಲ್ಲಿ 100 ಮಿಲಿಮೀಟರ್‌ಗೂ ಅಧಿಕ ಮಳೆ
ಬೆಂಗಳೂರು: ನಗರದಲ್ಲಿ ಮಳೆಯ ಆರ್ಭಟ (Heavy Rain) ಮುಂದುವರಿದಿದೆ. ಶನಿವಾರ ರಾತ್ರಿ ಸುರಿದ ಮಳೆಗೆ 49 ಪ್ರದೇಶಗಳಲ್ಲಿ ಮಳೆಹಾನಿಯಾಗಿದೆ. 49 ಪ್ರದೇಶಗಳ ಪೈಕಿ 3ಕ್ಕೂ ಹೆಚ್ಚು ಪ್ರದೇಶಗಳಲ್ಲಿ 100ಕ್ಕೂ ಹೆಚ್ಚು ಮಿಲಿ ಮೀಟರ್ ಮಳೆಯಾಗಿದೆ. ಬಸವೇಶ್ವರ ನಗರದಲ್ಲಿ 109.50 ಮಿಮೀ, ನಾಗಪುರದಲ್ಲಿ 104 ಮಿಮೀ ಹಾಗೂ ಹಂಪಿನಗರದಲ್ಲಿ 102 ಮಿಮೀ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ರಾತ್ರಿ 9:45 ಗಂಟೆ ಬಳಿಕ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗಿದೆ.
Advertisement
ಹಲವೆಡೆ ಅನಾಹುತ:
ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಭಾರೀ ಅನಾಹುತವನ್ನುಂಟು ಮಾಡಿದೆ. ನಗರದ ಬಿನ್ನಿಪೇಟೆಯಲ್ಲಿ ಕಾಂಪೌಡ್ ಕುಸಿದಿದ್ದು, ಹತ್ತಾರು ಗಾಡಿಗಳು ಜಖಂಗೊಂಡಿವೆ. 45 ಮನೆಗಳಿಗೆ ನೀರು ನುಗ್ಗಿದೆ.ಕಾಂಪೌಡ್ ಕುಸಿತ ಪರಿಣಾಮ 16 ಮನೆಗಳಿಗೆ ಜಲದಿಗ್ಭಂಧನ ಉಂಟಾಗಿದೆ. ಇದನ್ನೂ ಓದಿ: ಛತ್ತೀಸ್‌ಗಢ ಎನ್‌ಕೌಂಟರ್| 35 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ
Advertisement
Advertisement
ಮತ್ತೊಂದೆಡೆ ಕೆ.ಆರ್ ಮಾರುಕಟ್ಟೆಯ ರಸ್ತೆಯಲ್ಲಾ ಜಲಾವೃತ್ತವಾಗಿತ್ತು. ಮಂಡಿವರೆಗೆ ಮಳೆ ನೀರು ಹರಿಯುತ್ತಿದ್ದರಿಂದ ವಾಹನ ಸವಾರರು ಪರದಾಡವಂತಹ ಸ್ಥಿತಿ ನಿರ್ಮಾಣವಾಗಿತ್ತು. ಸ್ಯಾಂಕಿ ರಸ್ತೆಯಲ್ಲಿ ನೀರು ನಿಂತು ಅಕ್ಷರಶಃ ಜನರು ನಲುಗಿ ಹೋಗಿದ್ದರು. ವಾಹನ ಸವಾರರು ಪರದಾಡಿದ್ರು. ಇದನ್ನೂ ಓದಿ: Exit Poll Results: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಕನಸು ಭಗ್ನ – ಕಾಂಗ್ರೆಸ್ ಅಧಿಕಾರಕ್ಕೆ
Advertisement
ಟ್ರಾಫಿಕ್ ಜಾಮ್ ಸಮಸ್ಯೆ:
ಒಂದಡೆ ಮಳೆ.. ಮತ್ತೊಂದಡೆ ಟ್ರಾಫಿಕ್ ಜಾಮ್… ಸಮಸ್ಯೆ ಏಕಕಾಲಕ್ಕೆ ಸಂಭವಿಸಿತ್ತು. ಬಳ್ಳಾರಿ ರಸ್ತೆ ಮಾರ್ಗ ಮಳೆಯಿಂದಾಗಿ ಸ್ಥಬ್ದವಾಗಿತ್ತು. ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರ ಪರಿಸ್ಥಿತಿ ಹೇಳತೀರದಾಗಿತ್ತು.
ರಸ್ತೆಯೆಲ್ಲಾ ಕೆರೆ:
ಇದಲ್ಲದೇ ಟೌನ್ ಹಾಲ್, ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿದ್ದವು. ಇದನ್ನೂ ಓದಿ: Exit Poll Result | ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟಕ್ಕೆ ಅಧಿಕಾರ – ಬಿಜೆಪಿಗೆ ಹಿಂದಿಗಿಂತ ಹೆಚ್ಚು ಸ್ಥಾನ