ಬೆಂಗಳೂರು: ಮುಖ್ಯಮಂತ್ರಿಗಳು ಅಮೆರಿಕ ಪ್ರವಾಸದಲ್ಲಿ ಇರುವ ಸಂದರ್ಭದಲ್ಲಿ ಮೈತ್ರಿ ಸರ್ಕಾರ ಶಾಸಕರು ರಾಜೀನಾಮೆಗೆ ಮುಂದಾಗಿದ್ದು, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಶಾಸಕ ಆನಂದ್ ಸಿಂದ್ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಮೈತ್ರಿ ಸರ್ಕಾರ ಪತನ ಆರಂಭವಾಗಿದ್ಯಾ ಎನ್ನುವ ಪ್ರಶ್ನೆ ಎದ್ದಿದೆ.
Advertisement
Advertisement
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ರಮೇಶ್ ಜಾರಕಿಹೊಳಿ ಅವರು ಪತ್ರ ಬರೆದಿದ್ದು, ಈ ಪತ್ರವನ್ನು ಅವರೇ ಸ್ವತಃ ಸ್ಪೀಕರ್ ಅವರಿಗೆ ತಲುಪಿಸುವ ಸಾಧ್ಯತೆ ಇದೆ. ಬಂಡಾಯ ಶಾಸಕರ ಸಾಲಿನಲ್ಲಿ ಗುರುತಿಸಿಕೊಂಡಿದ್ದ ರಮೇಶ್ ಜಾರಕಿಹೊಳಿ ಅವರು, ಕಳೆದ ಮೂರು ದಿನಗಳಿಂದ ಬಹಿರಂಗವಾಗಿ ಕಾಣಿಸಿಕೊಳ್ಳದೆ ಅಚ್ಚರಿ ಮೂಡಿಸಿದ್ದರು.
Advertisement
ಆನಂದ್ ಸಿಂಗ್ ಅವರು ರಾಜೀನಾಮೆಗೆ ಜಿಂದಾಲ್ ಭೂಮಿ ನೀಡಿದ ಕಾರಣ ತಿಳಿಸಿದರೆ ರಮೇಶ್ ಜಾರಕಿಹೊಳಿ ಅವರು ಯಾವ ಕಾರಣ ನೀಡುತ್ತಾರೆ ಎಂಬ ಕುತೂಹಲ ಮೂಡಿದೆ.
Advertisement
ರಾಜೀನಾಮೆ ವಿಚಾರದ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಆರ್.ಅಶೋಕ್, ಆನಂದ್ ಸಿಂಗ್ ರಾಜೀನಾಮೆಯಿಂದ ಸರ್ಕಾರ ಪತನವಾಗುತ್ತದೆ. ಇದು ಬೀಳುವ ಸರ್ಕಾರ. ಅದಷ್ಟು ಬೇಗ ಸರ್ಕಾರ ಬೀಳಿಸಲು ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅತೃಪ್ತ ಶಾಸಕರು ಗುಂಪುಗಾರಿಕೆ ಶುರು ಮಾಡಿದ್ದಾರೆ. ಅದು ಸ್ಫೋಟ ಆಗುವುದಕ್ಕೆ ಆನಂದ್ ಸಿಂಗ್ ಅವರು ಗುದ್ದಲಿ ಪೂಜೆಯನ್ನು ಮಾಡಿದ್ದಾರೆ. ಆನಂದ್ ಸಿಂಗ್ ತಮ್ಮ ಮಾತನ್ನು ಅನುಸರಿಸುತ್ತಾರೆ. ಸಾಕಷ್ಟು ಜನರು ಈ ಸಮ್ಮಿಶ್ರ ಸರ್ಕಾರ ಬೇಗ ತೊಲಗಲಿ ಎಂದು ಕಾಯುತ್ತಿದ್ದಾರೆ. ಈ ಸರ್ಕಾರದಲ್ಲಿ ಶಾಸಕರಿಗೆ ಬೆಲೆ ಇಲ್ಲ. ಕೇವಲ ಸಿಎಂ ಹಾಗೂ ಡಿಕೆಶಿಗೆ ಮಾತ್ರ ಈ ಸರ್ಕಾರ ಬೇಕು ಎಂದು ಹೇಳಿದ್ದರು.
ಸರ್ಕಾರ ಬೀಳಿಸಲು ನಾವು ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಇದು ಅದಾಗಿ ಅದೇ ಬೀಳುವ ಸರ್ಕಾರ. ಈ ಸರ್ಕಾರಕ್ಕೆ ದಿಕ್ಕು-ದೆಸೆ ಇಲ್ಲ. ಸ್ವತಃ ದೇವೇಗೌಡರೇ ಚುನಾವಣೆಯಲ್ಲಿ ಸೋತ ಮೇಲೆ ಈ ಸರ್ಕಾರ ಸೂತ್ರ ಇಲ್ಲದ ಗಾಳಿಪಟದಂತಾಗಿದೆ. ಎಲ್ಲಿ ಬೇಕೋ ಹಾರಡಿಕೊಂಡು ಹೋಗಿ ಕೊನೆಗೆ ಲೈಟ್ ಕಂಬಕ್ಕೆ ತಗಲಾಗಿಕೊಳ್ಳುತ್ತದೆ. ಆನಂದ್ ಸಿಂಗ್ ಅವರು ಇದನ್ನು ಪ್ರಾರಂಭಿಸಿದ್ದಾರೆ. ಯಾರು ಮುಕ್ತಾಯ ಮಾಡುತ್ತಾರೋ ಕಾದು ನೋಡಬೇಕಿದೆ ಎಂದು ಅಶೋಕ್ ಹೇಳಿದ್ದರು.