Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ, ನೆಮ್ಮದಿಯ ಭರವಸೆ: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ, ನೆಮ್ಮದಿಯ ಭರವಸೆ: ಆರ್.ಅಶೋಕ್

Districts

ರಾಜ್ಯ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ, ನೆಮ್ಮದಿಯ ಭರವಸೆ: ಆರ್.ಅಶೋಕ್

Public TV
Last updated: March 3, 2024 3:40 pm
Public TV
Share
2 Min Read
R Ashok
SHARE

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ (Congress Government) ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮುಖ್ಯಮಂತ್ರಿ ಮಾತ್ರವಲ್ಲ ಇಡೀ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ- ನೆಮ್ಮದಿಯ ಭರವಸೆ ಲಭಿಸಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಅವರು ಹೇಳಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಬಾಂಬ್ ಬ್ಲಾಸ್ಟ್ (Bomb Blast) ಆಗಬೇಕು? ಈ ಸರ್ಕಾರ ಯಾಕೆ ಕಣ್ಮುಚ್ಚಿ ಕುಳಿತಿದೆ? ಯಾರನ್ನು ಓಲೈಸುತ್ತಿದೆ? ಎಫ್‍ಎಸ್‍ಎಲ್ (FSL) ವರದಿ ಬಿಡುಗಡೆ ಮಾಡದೇ ಇರಲು ಸರ್ಕಾರದ ಮೇಲೆ ಸೋನಿಯಾ ಗಾಂಧಿ- ರಾಹುಲ್ ಗಾಂಧಿಯವರ ಒತ್ತಡ ಇದೆಯೇ ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮನಸ್ಸನ್ನು ಪೂರ್ತಿ ಕಲ್ಮಶ ಮಾಡುವ ಕಡೆಗೆ ಹೋಗುತ್ತಿದೆ ಎಂದು ಆರೋಪಿಸಿದರು. ಕೆಂಗಲ್ ಹನುಮಂತಯ್ಯನವರು ಕಟ್ಟಿಸಿದ ವಿಧಾನಸೌಧ ರಾಜ್ಯದ ಹೃದಯವಿದ್ದಂತೆ. ಅಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಅಕ್ಷಮ್ಯ ಎಂದು ತಿಳಿಸಿದರು. ಇದನ್ನೂ ಓದಿ: ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗಕ್ಕೆ ಪೂಜೆ – ರಥಯಾತ್ರೆಗೆ ಹೈಕೋರ್ಟ್ ಅಸ್ತು

 

ಅಲ್ಪಸಂಖ್ಯಾತರು ತಮಗೆ ಮತ ಹಾಕಿದರೆ ಸಾಕು, ಬಹುಸಂಖ್ಯಾತರನ್ನು ಬಗ್ಗು ಬಡಿಯುತ್ತೇವೆ ಎಂಬ ನೀತಿ ಕಾಂಗ್ರೆಸ್ ಪಕ್ಷದ್ದು. ನೀವೇನಾದರೂ ಮಾಡಿ; ಕೆಜೆ ಹಳ್ಳಿ, ಡಿಜೆ ಹಳ್ಳಿಯಲ್ಲಿ ಗಲಭೆ ಮಾಡಿ. ಮೈಸೂರಿನಲ್ಲಿ ಅವರ ಶಾಸಕರ ಹತ್ಯೆ ಪ್ರಯತ್ನ ಮಾಡಿದರೂ ಏನೂ ಮಾಡುವುದಿಲ್ಲ ಎಂಬ ಕರ್ನಾಟಕದ ಕಾಂಗ್ರೆಸ್ ಮನಸ್ಥಿತಿ ಗಂಡಾಂತರ ತರುವಂತಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದಕರೆಂಬ ಇಲಿಗಳು ಬಿಲದಿಂದ ಹೊರ ಬಂದು ಹುಲಿಗಳಾಗಿವೆ. ನಮ್ಮನ್ನೇನೂ ಮಾಡುವುದಿಲ್ಲ ಎಂಬ ಮನಸ್ಥಿತಿ ಭಯೋತ್ಪಾದಕರದ್ದಾಗಿದೆ. ಇದು ದೊಡ್ಡ ಆಘಾತ ತಂದಿದೆ ಎಂದು ವಿವರಿಸಿದರು.

ಸರ್ಕಾರ ಅವರ ಬಗ್ಗೆ ಸಹಾನುಭೂತಿ ತೋರುವುದು ಆಘಾತಕಾರಿ ವಿಚಾರ. ರಾಜ್ಯ ಸರ್ಕಾರ ಕೋಮುವಾದದ ಕಡೆ ವಾಲುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆಯ ಪ್ರವೃತ್ತಿ ಮುಂದುವರೆದಿದೆ. ಅಲ್ಪಸಂಖ್ಯಾತರ ಬಗ್ಗೆ ಬರುವ ವಿಷಯಗಳನ್ನು ಕಾಂಗ್ರೆಸ್ಸಿಗರು ನಿರಂತರವಾಗಿ ಮುಚ್ಚಿಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಪಾಕ್‌ ಪರ ಘೋಷಣೆ – FSL ವರದಿ ಇನ್ನೂ ಬಂದಿಲ್ಲ, ಬಂದ ನಂತರ ಕ್ರಮ : ಪರಮೇಶ್ವರ್‌

 

ಬಾಂಬ್ ಸ್ಫೋಟದ ಆರೋಪಿಗಳನ್ನು ಅಮಾಯಕರು, ಮೈ ಬ್ರದರ್ಸ್ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಕೆಲದಿನಗಳ ಹಿಂದೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ. ‘ಆ ರೀತಿ ಹೇಳಿಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಫಾರೆನ್ಸಿಕ್ ವರದಿಯಲ್ಲಿ ಹಾಗೆ ಆಗಿಲ್ಲ ಎಂದು ಬರಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮಾಧ್ಯಮಗಳು ಘೋಷಣೆ ಕೂಗಿದ್ದು ನಿಜ ಎಂದು ಪ್ರಕಟಿಸಿದರೂ ಕಾಂಗ್ರೆಸ್‍ನವರು ಅದನ್ನು ಮುಚ್ಚಿಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಆಗಿದೆ. ಆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಹೋಗಿ, ‘ಇದು ಬಿಸಿನೆಸ್ ರೈವಲ್ರಿ; ತಿಂಡಿ ವಿಚಾರದದಲ್ಲಿ ಒಳಜಗಳ’ ಎಂದಿದ್ದರು. ಈಗ ಅದು ಭಯೋತ್ಪಾದಕರ ಕೃತ್ಯ ಎಂದು ಗೊತ್ತಾಗಿದೆ. ಆದರೂ ಅದನ್ನು ಮುಚ್ಚಿಡುತ್ತಿದ್ದಾರೆ ಎಂದು ಟೀಕಿಸಿದರು.

 

TAGGED:ashokbengalurubjpcongresspoliticsಅಶೋಕ್ಕಾಂಗ್ರೆಸ್ಬೆಂಗಳೂರುರಾಜಕೀಯ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

GBA Budget
Bengaluru City

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ 3,889 ಕೋಟಿ ಗಾತ್ರದ ಬಜೆಟ್ ಮಂಡನೆ – 1,500 ಕೋಟಿ ಆಸ್ತಿ ತೆರಿಗೆ ಸಂಗ್ರಹ ಗುರಿ

Public TV
By Public TV
58 seconds ago
Ballary Bear Captured
Bellary

Automatic Mobile App Based Cage locking System ಬಳಿಸಿ ಜಿಂದಾಲ್‌ನಲ್ಲಿದ್ದ ಮೂರು ಕರಡಿ ಸೆರೆ

Public TV
By Public TV
35 minutes ago
ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
1 hour ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
1 hour ago
Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
2 hours ago
Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?