ಬೆಂಗಳೂರು: ರಾಜಧಾನಿಯ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗಿರುವ ಶಂಕಿತರ ಉಗ್ರರನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ.
ಕೋಲ್ಕತ್ತಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಶಂಕಿತರಾದ ಅಬ್ದುಲ್ ಮತೀನ್ ತಾಹ, ಮುಸಾವಿರ್ ಹುಸೇನ್‌ನನ್ನು ಎನ್‌ಐಎ ಪೊಲೀಸರು ಕರೆತಂದರು. ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ. ಇದನ್ನೂ ಓದಿ: ಕೋಡ್‌ವರ್ಡ್ ಸಹಾಯದಿಂದ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಆರೋಪಿಗಳು ಅರೆಸ್ಟ್!
Advertisement
Advertisement
ಬಾಂಬ್ ಬ್ಲಾಸ್ಟ್ ಕೇಸಲ್ಲಿ ಬಂಧಿತರಾಗಿರುವ ಮುಜಾಮಿಲ್ ಶರೀಫ್, ಮಾಜ್ ಮಾನಿರ್ ಹೇಳಿಕೆ ಅಧರಿಸಿ ವಿಚಾರಣೆ ನಡೆಸಲಾಗುವುದು. ರಾಮೇಶ್ವರಂ ಬಾಂಬ್ ಸ್ಫೋಟ ಕೇಸಲ್ಲಿ ಯಾರ‍್ಯಾರ ಪಾತ್ರ ಏನಿತ್ತು? ಈ ಕೃತ್ಯದ ಹಿಂದೆ ಬೇರೆ ಯಾರೆಲ್ಲಾ ಇದ್ದಾರೆ? ರಾಮೇಶ್ವರಂ ಕೆಫೆಯಲ್ಲೇ ಬಾಂಬ್ ಬ್ಲಾಸ್ಟ್ ಮಾಡಿದ ಉದ್ದೇಶವೇನು? ಬೇರೆ ಎಲ್ಲೆಲ್ಲಿ ವಿಧ್ವಂಸಕ ಕೃತ್ಯವೆಸಗಲು ಪ್ಲಾನ್ ಮಾಡಲಾಗಿತ್ತು ಎಂಬ ಅಂಶಗಳು ಸೇರಿದಂತೆ ನಾನಾ ದೃಷ್ಟಿಕೋನದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.
Advertisement
Advertisement
ಇಂದು ಬೆಳಗ್ಗೆ 10 ಗಂಟೆಗೆ ಎನ್‌ಐಎ ವಿಶೇಷ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಅಧಿಕಾರಿಗಳು ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ. ಭದ್ರತಾ ದೃಷ್ಟಿಯಿಂದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಿರುವ ಅಧಿಕಾರಿಗಳು, 14 ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲು ತಯಾರಿ ನಡೆಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬರ್ ಪಶ್ಚಿಮ ಬಂಗಾಳದಲ್ಲಿ ಅರೆಸ್ಟ್