ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ (Rameshwaram Cafe Blast) ಪ್ರಕರಣದಲ್ಲಿ ಮತ್ತಿಬ್ಬರನ್ನು ಎನ್‌ಐಎ (NIA) ವಶಕ್ಕೆ ಪಡೆದಿದೆ. ಶಂಕಿತರ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜ್ಯದ ಹಲವೆಡೆ ಎನ್‌ಐಎ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ರಾಮೇಶ್ವರಂ ಕೆಫೆ ಸ್ಫೋಟ ಹಾಗೂ ಹಳೇ ಪ್ರಕರಣಗಳ ನಡುವೆ ಸಾಮ್ಯತೆ ಇರಬಹುದು ಎನ್ನಲಾಗಿದೆ. ಹೀಗಾಗಿ ಹಳೇ ಪ್ರಕರಣಗಳಲ್ಲಿ ಭಾಗಿಯಾದ ಹಲವರ ಮೇಲೆ ಎನ್ಐಎ ನಿಗಾವಹಿಸಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್ – ಬೆಂಗ್ಳೂರು, ಶಿವಮೊಗ್ಗ, ಹುಬ್ಬಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ
Advertisement
Advertisement
ಈಗಾಗಲೇ ಜೈಲಿನಲ್ಲಿರುವ ಹಲವರನ್ನು ಎನ್‌ಐಎ ವಿಚಾರಣೆ ನಡೆಸಿದೆ. ತಲೆಮರೆಸಿಕೊಂಡಿರುವ ಇನ್ನೂ ಕೆಲವರ ಪತ್ತೆಗೆ ಬಲೆ ಬೀಸಿದೆ. ಶಂಕಿತರಿಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನೆರವು ನೀಡಿದವರ ಮೇಲೆ ಎನ್ಐಎ ಕಣ್ಣಿಟ್ಟಿದೆ. ಅಂಥವರನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸುತ್ತಿದೆ.
Advertisement
ಅನುಮಾನಸ್ಪದ ವ್ಯಕ್ತಿಗಳಿಂದ ಸ್ಫೋಟ ನಡೆಸಿದವರ ಬಗ್ಗೆ ಸುಳಿವು ಸಿಗುವ ಸಾಧ್ಯತೆ ಇದೆ. ತಾಂತ್ರಿಕವಾಗಿ ಅಥವಾ ಮೌಖಿಕವಾಗಿ ಮಾಹಿತಿ ಲಭ್ಯವಾಗಬಹುದು. ಆದ್ದರಿಂದ ಸಂಶಯಾಸ್ಪದ ವ್ಯಕ್ತಿಗಳನ್ನ ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸುತ್ತಿದೆ. ಆ ಮೂಲಕ ಸ್ಫೋಟ ನಡೆಸಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ ಬಲೆ ಬೀಸಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ- ಎನ್‍ಐಎಗೆ ಸಿಕ್ಕಿತು ಚೆನ್ನೈ ಲಿಂಕ್
Advertisement
ಮೊಬೈಲ್ ಕರೆಗಳು, ವಾಟ್ಸಪ್ ಚಾಟಿಂಗ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಬಾಂಬ್ ಸ್ಫೋಟ ಮಾಡಿದ ಆರೋಪಿಗಳ ಪತ್ತೆಗೆ ಎನ್ಐಎ ತಲಾಷ್ ನಡೆಸಿದೆ.